alex Certify ವಿವಾಹಿತೆ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದ 17ರ ಹುಡುಗ….! ಗಲಾಟೆ ನಂತ್ರ ಮಾಡಿದ್ದೇನು ಗೊತ್ತಾ….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿವಾಹಿತೆ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದ 17ರ ಹುಡುಗ….! ಗಲಾಟೆ ನಂತ್ರ ಮಾಡಿದ್ದೇನು ಗೊತ್ತಾ….?

ರಾಷ್ಟ್ರ ರಾಜಧಾನಿ ದೆಹಲಿಯ ದಾಬ್ರಿ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. 17 ವರ್ಷದ ಅಪ್ರಾಪ್ತ ಬಾಲಕನೊಬ್ಬ ವಿವಾಹಿತ ಮಹಿಳೆ ಹತ್ಯೆ ಮಾಡಿದ್ದಾನೆ. ಇಷ್ಟೇ ಅಲ್ಲ ಆಕೆ ಖಾಸಗಿ ಅಂಗವನ್ನು ಸುಟ್ಟಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

17 ವರ್ಷದ ಹುಡುಗನಿಗೆ ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧವಿತ್ತು. ಅನೇಕ ಬಾರಿ ಇಬ್ಬರು ಒಂದಾಗಿದ್ದರು. ಆದ್ರೆ ಕೆಲ ದಿನಗಳಿಂದ ಇಬ್ಬರ ಮಧ್ಯೆ ಗಲಾಟೆ ನಡೆಯುತ್ತಿತ್ತಂತೆ. ನವೆಂಬರ್ 15ರಂದು ಮಹಿಳೆ ಶವ ಪೊಲೀಸರಿಗೆ ಸಿಕ್ಕಿತ್ತು. ಹತ್ಯೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ವಿಚಾರಣೆ ಶುರು ಮಾಡಿದ್ದರು. ಮಹಿಳೆ ನಾಪತ್ತೆಯಾಗಿದ್ದಾಳೆಂದು ಯಾರೂ ದೂರು ನೀಡಿರಲಿಲ್ಲ. ಸಿಸಿ ಟಿವಿಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಕಾಣಿಸಿಕೊಂಡಿದ್ದ. ವಾಹನದಲ್ಲಿ ಶವ ತುಂಬುವ ದೃಶ್ಯ ಸೆರೆಯಾಗಿತ್ತು.

ಆತನ ಪತ್ತೆ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಅಪ್ರಾಪ್ತ ತಪ್ಪೊಪ್ಪಿಕೊಂಡಿದ್ದಾನೆ. ಮಹಿಳೆಗೆ ವಿವಾಹವಾಗಿತ್ತು. ನಮ್ಮಿಬ್ಬರ ಮಧ್ಯೆ ಅನೇಕ ದಿನಗಳಿಂದ ಗಲಾಟೆ ನಡೆಯುತ್ತಿತ್ತು. ಘಟನೆ ನಡೆದ ದಿನ, ಮಹಿಳೆಯನ್ನು ಮನೆಗೆ ಕರೆಯಿಸಿಕೊಂಡಿದ್ದೆ. ಆ ದಿನ ಕೂಡ ಇಬ್ಬರ ಮಧ್ಯೆ ಗಲಾಟೆ ನಡೆದಿತ್ತು. ಕೋಪಗೊಂಡು, ರಾಡ್ ನಿಂದ ಆಕೆ ತಲೆಗೆ ಹೊಡೆದೆ. ನಂತ್ರ ಖಾಸಗಿ ಅಂಗವನ್ನು ಸುಟ್ಟು, ಶವವನ್ನು ನಿರ್ಜನ ಪ್ರದೇಶದಲ್ಲಿ ಎಸೆದು ಹೋಗಿದ್ದೆ ಎಂದು ಆತ ಹೇಳಿದ್ದಾನೆ. ಪೊಲೀಸರು ರಾಡ್ ಹಾಗೂ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...