alex Certify ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಟ್ರಕ್; ಪೊಲೀಸ್ ಇನ್ಸ್ ಪೆಕ್ಟರ್ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಟ್ರಕ್; ಪೊಲೀಸ್ ಇನ್ಸ್ ಪೆಕ್ಟರ್ ಸ್ಥಳದಲ್ಲೇ ದುರ್ಮರಣ

ನವದೆಹಲಿ: ಭೀಕರ ರಸ್ತೆ ಅಪಘಾತದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಓರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

ರಸ್ತೆ ಬದಿ ನಿಂತಿದ್ದ ಕಾರಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದ್ದು, ಕಾರಿನ ಬಳಿ ನಿಂತಿದ್ದ ಪೊಲೀಸ್ ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾದಿಪುರ ಮೆಟ್ರೋ ನಿಲ್ದಾಣದ ರೋಹ್ಟಕ್ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ.

ಪೊಲೀಸ್ ಇನ್ಸ್ ಪೆಕ್ಟರ್ ತಮ್ಮ ಕಾರಿನಲ್ಲಿ ಅದೇ ಮಾರ್ಗವಾಗಿ ಹೋಗುತ್ತಿದ್ದರು. ಈ ವೇಳೆ ಕಾರಿನಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣಕ್ಕೆ ರಸ್ತೆ ಬದಿ ಕಾರು ನಿಲ್ಲಿಸಿದ್ದರು. ಈ ವೇಳೆ ವೇಗವಾಗಿ ಬಂದ ಟ್ರಕ್ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಟ್ರಕ್ ಡಿವೈಡರ್ ಮೇಲೆ ಹತ್ತಿ ನಿಂತಿದೆ. ಘಟನೆಯಲ್ಲಿ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಟ್ರಕ್ ಚಾಲಕ ಪರಾರಿಯಾಗಿದ್ದಾನೆ.

ಜಗಬೀರ್ ಸಿಂಗ್ ಮೃತ ಪೊಲೀಸ್ ಇನ್ಸ್ ಪೆಕ್ಟರ್. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...