ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ಸದ್ಯದ ಮಾಹಿತಿ ಪ್ರಕಾರ ನವದೆಹಲಿ ಕ್ಚೇತ್ರದಲ್ಲಿ ಅರವಿಂದ್ ಕೇಜ್ರಿವಾಲ್ ಮುನ್ನಡೆ ಸಾಧಿಸಿದ್ದಾರೆ. 254 ಮತಗಳಿಂದ ಕೇಜ್ರಿವಾಲ್ ಮುನ್ನಡೆ ಸಾಧಿಸಿದ್ದಾರೆ.
ಆರಂಭದಲ್ಲಿ ಆಪ್ ಸಂಸ್ಥಾಪಕ, ಮಾಜಿ ಸಿಎಂ ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ಮೂವರು ನಾಯಕರೂ ಹಿನ್ನಡೆಯಲ್ಲಿದ್ದರು. ಆದರೆ ಇದೀಗ 254 ಮತಗಳಿಂದ ಕೇಜ್ರಿವಾಲ್ ಮುನ್ನಡೆ ಸಾಧಿಸಿದ್ದಾರೆ.
ಬಿಜೆಪಿ ಮ್ಯಾಜಿಕ್ ಸಂಖ್ಯೆಯನ್ನೂ ದಾಟಿ ಮುನ್ನಡೆ ಕಾಯ್ದುಕೊಂಡಿದೆ. ಮುಸ್ಲಿಂ ಪ್ರಾಬಲವಿರುವ ಕ್ಷೇತ್ರಗಳಲ್ಲಿಯೂ ಬಿಜೆಪಿ ಮುನ್ನಡೆಯಲ್ಲಿದೆ.