
ಬೆಂಗಳೂರು: ನಾಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ ನಾಳೆ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ನಾಳೆ ಸಂಜೆ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಕೇಂದ್ರೀಯ ಚುನಾವಣೆ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ಪಾಲ್ಗೊಳ್ಳಲಿರುವ ಬಿ.ಎಸ್.ವೈ. ಗುರುವಾರ ಮಧ್ಯಾಹ್ನ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.