alex Certify ದೆಹಲಿಯಲ್ಲಿ ಏಕಾಏಕಿ ಕುಸಿದು ಬಿದ್ದ ಕಟ್ಟಡ: ಭಯಾನಕ ವಿಡಿಯೋ ವೈರಲ್​ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೆಹಲಿಯಲ್ಲಿ ಏಕಾಏಕಿ ಕುಸಿದು ಬಿದ್ದ ಕಟ್ಟಡ: ಭಯಾನಕ ವಿಡಿಯೋ ವೈರಲ್​

ನವದೆಹಲಿ: ರಾಷ್ಟ್ರ ರಾಜಧಾನಿಯ ಭಜನ್‌ಪುರ ಪ್ರದೇಶದಲ್ಲಿ ಕಟ್ಟಡವೊಂದು ಬುಧವಾರ ಕುಸಿದು ಬಿದ್ದಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕುಸಿತಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಕಟ್ಟಡ ಕುಸಿದು ಬಿದ್ದಿರುವ ನೋಟವು ಸಿಸಿ ಟಿವಿಯಲ್ಲಿ ದಾಖಲಾಗಿದ್ದು, ಅದರ ಭಯಾನಕ ವಿಡಿಯೋ ವೈರಲ್​ ಆಗಿದೆ.

ಪೊಲೀಸ್ ಅಧಿಕಾರಿಗಳ ಪ್ರಕಾರ, ಅಗ್ನಿಶಾಮಕ ದಳಕ್ಕೆ ಮಧ್ಯಾಹ್ನ 3:05 ಕ್ಕೆ ಮಾಹಿತಿ ಬಂದಿತು. ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಇದಕ್ಕೂ ಮುನ್ನ ಮಾರ್ಚ್ 1 ರಂದು ಉತ್ತರ ದೆಹಲಿಯ ರೋಶನಾರಾ ರಸ್ತೆಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ಬೆಂಕಿಗೆ ಆಹುತಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...