ನಿನ್ನೆಯ ರೋಮಾಂಚನಕಾರಿ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ 261 ರನ್ಗಳ ದೊಡ್ಡ ಮೊತ್ತವನ್ನು ಚೇಸ್ ಮಾಡುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ಎದುರು ರೋಚಕ ಜಯ ಸಾಧಿಸಿದ್ದು, ತಮ್ಮ ಸೆಮಿ ಫೈನಲ್ ಆಸೆಯನ್ನು ಇನ್ನೂ ಜೀವಂತವಾಗಿಸಿಕೊಂಡಿದೆ. ತಮ್ಮ ಕಳಪೆ ಆಟದಿಂದ ಟೀಕೆಗೀಡಾಗಿದ್ದ, ಜಾನಿ ಬೈರ್ಸ್ಟೋವ್ ನಿನ್ನೆಯ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ತಮ್ಮ ಹಳೆಯ ಫಾರ್ಮ್ ಗೆ ಮರಳಿದ್ದಾರೆ.
ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದ್ದು, ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ.
ಎರಡು ತಂಡಗಳಲ್ಲೂ ಬಲಿಷ್ಠ ಬ್ಯಾಟ್ಸ್ಮನ್ ಗಳಿದ್ದು, ಇಂದು ರನ್ ಹೊಳೆ ಹರಿಸಲು ಸಜ್ಜಾಗಿದ್ದಾರೆ. ಇದಾದ ಬಳಿಕ ಮತ್ತೊಂದು ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಸೆಣಸಾಡಲಿವೆ.