ನವದೆಹಲಿ: ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆಯನ್ನು ಎರಡು ದಿನಗಳ ಕಾಲ ಸ್ಥಗಿತಗೊಳಿಸುವುದಾಗಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರೊಬ್ಬರು ಘೋಷಿಸಿದರು.
ನಾವು ಖಾನೌರಿಯಲ್ಲಿ ಸಂಭವಿಸಿದ ಘಟನೆಯ ಬಗ್ಗೆ ಚರ್ಚಿಸುತ್ತೇವೆ. ದೆಹಲಿ ಕಡೆಗೆ ನಮ್ಮ ಮೆರವಣಿಗೆ ಎರಡು ದಿನಗಳ ವಾಸ್ತವ್ಯವನ್ನು ಒಳಗೊಂಡಿರುತ್ತದೆ. ನಮ್ಮ ಮುಂದಿನ ಕ್ರಮಗಳ ಬಗ್ಗೆ ನಾವು ಸಂಪೂರ್ಣ ಪರಿಸ್ಥಿತಿ ಅವಲೋಕಿಸಿದ ನಂತರ ಸ್ಪಷ್ಟಪಡಿಸುತ್ತೇವೆ ಎಂದು ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿಯ ಮುಖ್ಯಸ್ಥ ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆಯನ್ನು ಎರಡು ದಿನಗಳ ಕಾಲ ಸ್ಥಗಿತಗೊಳಿಸುವುದಾಗಿ ಘೋಷಿಸಿದ್ದಾರೆ.