
ಹರಿಯಾಣದ ಕುಸ್ತಿಪಟು ಭಜರಂಗ್ ಪೂನಿಯಾ, ಕಜಗಿಸ್ತಾನದ ಡೌಲೆಟ್ ನಿಯಾಜ್ಬೆಕೊವ್ರನ್ನು ಸೋಲಿಸಿ ಟೋಕಿಯೋ ಒಲಿಂಪಿಕ್ನಲ್ಲಿ ಕಂಚಿನ ಪದಕವನ್ನು ಸಂಪಾದಿಸುವಲ್ಲಿ ಯಶಸ್ವಿಯಾಗಿದ್ದರು. ಇದು ಭಜರಂಗ್ ಪೂನಿಯಾರ ಚೊಚ್ಚಲ ಒಲಿಂಪಿಕ್ ಪದಕವಾಗಿದೆ.
ಒಲಿಂಪಿಕ್ ಕಂಚಿನ ಪದಕ ವಿಜೇತ ಭಜರಂಗ್ ಪೂನಿಯಾರನ್ನು ಇಂದು ನನ್ನ ನಿವಾಸದಲ್ಲಿ ಭೇಟಿಯಾಗಿದ್ದಕ್ಕೆ ಖುಷಿಯಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ. ಪೂನಿಯಾ ದೇಶಕ್ಕೆ ಹೆಮ್ಮೆ ತರುವಂತಹ ಕೆಲಸ ಮಾಡಿದ್ದಾರೆ. ಇವರು ದೇಶದ ಯುವಜನತೆಯ ಪಾಲಿಗೆ ಸ್ಫೂರ್ತಿಯ ಚಿಲುಮೆಯಾಗಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.