ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತೆ ತಿಹಾರ್ ಜೈಲಿಗೆ ಶರಣಾಗಿದ್ದಾರೆ. ಮಧ್ಯಂತ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತೆ ತಿಹಾರ್ ಜೈಲು ಪಾಲಾಗಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ 21 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ಜಾಮೀನು ಅವಧಿ ಮುಗಿಯುತ್ತಿದ್ದಂತೆ ಮತ್ತೆ ಜೈಲಿಗೆ ಬಂದು ಶರಣಾಗುವಂತೆ ಸೂಚಿಸಿತ್ತು.
ಈ ನಡುವೆ ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿತ್ತು. ಈ ಹಿನ್ನೆಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಇಂದು ಮತ್ತೆ ತಿಹಾರ್ ಜೈಲಿಗೆ ತೆರಳಿ ಶರಣಾಗಿದ್ದಾರೆ. ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಯಲ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು.