ನವದೆಹಲಿ : ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಗೆ ಜಾಮೀನು ಮಂಜೂರು ಮಾಡಲಾಗಿದೆ.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ ಹಿನ್ನೆಲೆ ಅವರು ದೆಹಲಿ ಕೋರ್ಟ್ ಗೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಕೇಜ್ರಿವಾಲ್ ಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ದೆಹಲಿ ಇಡಿ ವಿಶೇಷ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ. ಕೇಜ್ರಿವಾಲ್ ಗೆ ಇಡಿ ಅಧಿಕಾರಿಗಳು 8 ಬಾರಿ ಸಮನ್ಸ್ ನೀಡಿದ್ದರು. 8 ಬಾರಿ ಸಮನ್ಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಹಿನ್ನಲೆ ಇಡಿ ಅಧಿಕಾರಿಗಳು ಕೋರ್ಟ್ ಮೊರೆ ಹೋಗಿದ್ದರು. ನಂತರ ಕೋರ್ಟ್ ಕ್ರೇಜ್ರಿವಾಲ್ ಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿತ್ತು, ವಿಚಾರಣೆ ನಡೆಸಿದ ದೆಹಲಿ ಇಡಿ ವಿಶೇಷ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ.