ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಜನವರಿ 3 ರಂದು ವಿಚಾರಣೆಗೆ ಹಾಜರಾಗುವಂತೆ ಮೂರನೇ ಬಾರಿಗೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ ನೀಡಿದೆ.
ಮದ್ಯದ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಸತತ ಮೂರನೇ ಬಾರಿಗೆ ಸಮನ್ಸ್ ನೀಡಲಾಗಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಇಡಿ ನೀಡಿರುವ ಹೊಸ ಸಮನ್ಸ್ ಗೆ ಪ್ರತಿಕ್ರಿಯಿಸಿದ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಅವರು, ಇಡೀ ಪ್ರಕರಣವು ನಕಲಿ. ಆಮ್ ಆದ್ಮಿ ಪಕ್ಷ ಮತ್ತು ಅರವಿಂದ್ ಕೇಜ್ರಿವಾಲ್ ಅವರನ್ನು ಬಲೆಗೆ ಬೀಳಿಸಲು ಸಂಪೂರ್ಣ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಈ ಹಿಂದೆ, ಡಿಸೆಂಬರ್ 21 ರಂದು ಹಾಜರಾಗಲು ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಲಾಗಿತ್ತು. ಅವರು ವಿಚಾರಣೆಗೆ ಹಾಜರಾಗಲಿಲ್ಲ.