alex Certify BIG NEWS: ಸಂಪುಟ ಪುನಾರಚನೆಗೆ ಮುಂದಾದ ಸಿಎಂ ಬೊಮ್ಮಾಯಿ ನಾಳೆ ದೆಹಲಿ ಭೇಟಿ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಂಪುಟ ಪುನಾರಚನೆಗೆ ಮುಂದಾದ ಸಿಎಂ ಬೊಮ್ಮಾಯಿ ನಾಳೆ ದೆಹಲಿ ಭೇಟಿ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಪ್ರಧಾನಿ ಮೋದಿಯವರ ಭೇಟಿಗೆ ಸಿಎಂ ಸಮಯ ಕೇಳಿದ್ದಾರೆ.

ಸಚಿವ ಸಂಪುಟ ವಿಸ್ತರಣೆ, ಸಂಪುಟ ಪುನಾರಚನೆ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಪ್ರಧಾನಿ ಅವರೊಂದಿಗೆ ಸಿಎಂ ಚರ್ಚೆ ನಡೆಸುವ ಸಾಧ್ಯತೆ ಇದೆ. ಮೇಕೆದಾಟು, ಕೃಷ್ಣಾ, ಮಹದಾಯಿ ಸೇರಿದಂತೆ ಅಂತರರಾಜ್ಯ ಜಲವಿವಾದಗಳ ಬಗ್ಗೆ ಸಿಎಂ ಚರ್ಚೆ ನಡೆಸುವ ಸಾಧ್ಯತೆ ಇದೆ. ಅಲ್ಲದೆ, ರಾಜ್ಯ ಸಂಸದರನ್ನು ಭೇಟಿಯಾಗಿ ಬಜೆಟ್ ಪೂರ್ವ ಸಮಾಲೋಚನೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಸಿಎಂ ದೆಹಲಿ ಭೇಟಿ ಸಂದರ್ಭದಲ್ಲಿ ಸಂಪುಟ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವರಿಷ್ಠರು ಹಾಗೂ ರಾಜ್ಯದ ಅಭಿವೃದ್ಧಿ ವಿಚಾರಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವರನ್ನು ಭೇಟಿಯಾಗುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...