ನವದೆಹಲಿ: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಆರನೇ ಸಮನ್ಸ್ ಜಾರಿ ಮಾಡಿದೆ.
ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಕಳೆದ ಐದು ತಿಂಗಳಲ್ಲಿ ಐದು ಇಡಿ ಸಮನ್ಸ್ ಗಳನ್ನು ತಪ್ಪಿಸಿಕೊಂಡಿದ್ದರು. ಇದೀಗ ಮತ್ತೆ ಇಡಿ ಅಧಿಕಾರಿಗಳು ಆರನೇ ಸಮನ್ಸ್ ಜಾರಿ ಮಾಡಿದ್ದಾರೆ.
ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಕೋರ್ಟ್ ಫೆ.17 ರೊಳಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿತ್ತು. ಅರವಿಂದ್ ಕೇಜ್ರಿವಾಲ್ ಗೆ 5 ಸಮನ್ಸ್ ಗಳನ್ನು ಕಳುಹಿಸಿದರೂ ವಿಚಾರಣೆಗೆ ಹಾಜರಾಗುತ್ತಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿತ್ತು, ನಂತರ ಫೆ.17ರೊಳಗೆ ಕೋರ್ಟ್ ಗೆ ಹಾಜರಾಗುವಂತೆ ‘ಸಿಎಂ ಕೇಜ್ರಿವಾಲ್’ಗೆ ಸಮನ್ಸ್ ನೀಡಲಾಗಿತ್ತು.