alex Certify BIG NEWS: ರಾಜಧಾನಿಯಲ್ಲಿಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜಧಾನಿಯಲ್ಲಿಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ

ನವದೆಹಲಿ: ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಹಾಗೂ ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಜಾರಿ ನಿರ್ದೇಶನಾಲಯದಿಂದ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರ ವಿಚಾರಣೆ ವಿರೋಧಿಸಿ ದೆಹಲಿಯಲ್ಲಿ ಇಂದು ಕಾಂಗ್ರೆಸ್ ಪಕ್ಷದಿಂದ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗಿದೆ.

ದೆಹಲಿಯ ಜಂತರ್ ಮಂಥರ್ ನಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ ಕೈಗೊಂಡಿದ್ದು, ರಾಜ್ಯದ ಕಾಂಗ್ರೆಸ್ ನಾಯಕರು, ಜನಪ್ರತಿನಿಧಿಗಳು ಸೇರಿದಂತೆ ದೇಶದ ಎಲ್ಲ ರಾಜ್ಯಗಳ ಸಂಸದರು, ಶಾಸಕರು, ಪಕ್ಷದ ನಾಯಕರಿಗೆ ದೆಹಲಿಗೆ ಬರುವಂತೆ ಸೂಚನೆ ನೀಡಲಾಗಿದೆ.

ಇಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಲಿದೆ. ರಾಜ್ಯ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ 250 ಕ್ಕೂ ಅಧಿಕ ಮಂದಿ ದೆಹಲಿಗೆ ತೆರಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...