ದೆಹಲಿಯ ಮಂಗೋಲ್‌ಪುರಿ ಮೇಲ್ಸೇತುವೆಯ ಬಳಿ ವ್ಯಕ್ತಿಯೊಬ್ಬ ಯುವತಿಯನ್ನು ಥಳಿಸಿ ಕಾರಿನಲ್ಲಿ ಕುಳಿತುಕೊಳ್ಳುವಂತೆ ಒತ್ತಾಯಿಸುತ್ತಿರುವ ದೃಶ್ಯ ಅಂತರ್ಜಾಲದಲ್ಲಿ ವೈರಲ್ ಆಗಿದೆ.
ವ್ಯಕ್ತಿಯೊಬ್ಬ ಯುವತಿಯನ್ನು ಥಳಿಸಿ ಬಲವಂತವಾಗಿ ಕಾರಿನಲ್ಲಿ ಕೂರಿಸುವುದು ವಿಡಿಯೋದಲ್ಲಿ ಕಂಡುಬಂದಿದೆ. ಕಾರು ಗುರುಗ್ರಾಮದ ರತನ್ ವಿಹಾರ್‌ನಿಂದ ಬಂದಿದ್ದು, ಸಿಬ್ಬಂದಿಯ ತಂಡವನ್ನು ಕಳುಹಿಸಲಾಗಿದೆ. ಚಾಲಕ ಮತ್ತು ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ವೈರಲ್ ವಿಡಿಯೋ ಬಗ್ಗೆ ತಿಳಿಸಿದ್ದಾರೆ.
“ವಾಹನ ಮತ್ತು ಚಾಲಕನನ್ನು ಪತ್ತೆ ಮಾಡಲಾಗಿದೆ. ಇಬ್ಬರು ಹುಡುಗರು ಮತ್ತು ಓರ್ವ ಹುಡುಗಿ ರೋಹಿಣಿಯಿಂದ ವಿಕಾಸಪುರಿಗೆ ಉಬರ್ ಮೂಲಕ ವಾಹನವನ್ನು ಬುಕ್ ಮಾಡಿದ್ದರು. ದಾರಿಯಲ್ಲಿ, ಅವರ ನಡುವೆ ವಾಗ್ವಾದ ಮತ್ತು ಜಗಳ ನಡೆಯಿತು. ಜಗಳದ ನಂತರ ಹುಡುಗಿ ಕಾರ್ ನಿಂದ ಇಳಿದು ಹೊರಡಲು ಬಯಸಿದ್ದಳು. ಆಗ ಆಕೆಯೆನ್ನು ಬಲವಂತವಾಗಿ ಕಾರಿನೊಳಗೆ ತಳ್ಳಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಅಧಿಕಾರಿಗಳ ಪ್ರಕಾರ, ಚಾಲಕ ಮತ್ತು ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲು ಹೆಚ್ಚುವರಿ ತನಿಖೆ ನಡೆಯುತ್ತಿದೆ.
ಯುವತಿಯೊಬ್ಬರನ್ನು ಬಲವಂತವಾಗಿ ವಾಹನಕ್ಕೆ ಹತ್ತಿಸಿ ಥಳಿಸಿದ ಈ ವೈರಲ್ ವೀಡಿಯೊವನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯು) ಅವರು ದೆಹಲಿ ಪೊಲೀಸರಿಗೆ ನೋಟಿಸ್ ನೀಡುತ್ತಿರುವುದಾಗಿ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದೆ.