
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಜಲಶಕ್ತಿ ಸಚಿವರನ್ನು ಭೇಟಿಯಾಗಲಿರುವ ಅವರು ರಾಜ್ಯದ ನೀರಾವರಿ ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲಿದ್ದಾರೆ.
ನಂತರ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ಕಾಂಗ್ರೆಸ್ ಕಟ್ಟಡದ ಶಂಕುಸ್ಥಾಪನೆಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಲಿದ್ದು, ಇದೇ ವೇಳೆ ರಾಜ್ಯದ ರಾಜಕೀಯ ಸ್ಥಿತಿಗತಿಯ ಬಗ್ಗೆ ಅವರು ಪಕ್ಷದ ನಾಯಕರೊಂದಿಗೆ ಚರ್ಚಿಸುವ ಸಾಧ್ಯತೆ ಇದೆ.
ಹೈಕಮಾಂಡ್ ಎಚ್ಚರಿಕೆಯ ನಂತರವೂ ರಾಜ್ಯದ ಕೆಲವು ನಾಯಕರು ಬಹಿರಂಗ ಹೇಳಿಕೆ ನೀಡುತ್ತಿದ್ದು, ಈ ಬಗ್ಗೆ ಹೈಕಮಾಂಡ್ ಜೊತೆ ಡಿಕೆ ಚರ್ಚಿಸುವ ಸಾಧ್ಯತೆ ಇದೆ.