alex Certify BIG NEWS: ಶತಾಬ್ದಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ದುರಂತ; ಹೊತ್ತಿ ಉರಿದ ರೈಲಿನ ಬೋಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶತಾಬ್ದಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ದುರಂತ; ಹೊತ್ತಿ ಉರಿದ ರೈಲಿನ ಬೋಗಿ

Fire breaks out on Delhi-Dehradun Shatabdi Express train in Uttarakhand |  India News | Zee Newsಡೆಹ್ರಾಡೂನ್: ಡೆಹ್ರಾಡೂನ್ ಗೆ ತೆರಳುತ್ತಿದ್ದ ಶತಾಬ್ದಿ ಎಕ್ಸ್ ಪ್ರೆಸ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ರೈಲಿನ ಬೋಗಿಗಳು ಸಂಪುರ್ಣ ಸುಟ್ಟು ಕರಕಲಾಗಿದೆ.

ಉತ್ತರಾಖಂಡದ ಕನ್ ಸೂರ್ ಬಳಿ ದೆಹಲಿ-ಡೆಹ್ರಾಡೂನ್ ಶತಾಬ್ದಿ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಅವಘಡ ಸಂಭವಿಸಿದ್ದು, ಸಿ-4 ಬೋಗಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ರೈಲಿನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಪ್ರಯಾಣಿಕರನ್ನು ರೈಲಿನಿಂದ ಕೆಳಗಿಳಿಸಲಾಗಿದ್ದು, ಅದೃಷ್ಟವಶಾತ್ ಯಾವುದೇ ಸಾವು – ನೋವು ಸಂಭವಿಸಿಲ್ಲ ಎಂದು ಉತ್ತರಾಖಂಡ ಡಿಸಿಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...