![](https://kannadadunia.com/wp-content/uploads/2022/11/987514-basavaraj-bommai.jpg)
ದಾವಣಗೆರೆ: ಚುನಾವಣೆಯಲ್ಲಿ ಸೋತಾಗ ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ. ವಿರೋಧ ಪಕ್ಷಗಳು ನಿರಂತರವಾಗಿ ಈ ಆರೋಪವನ್ನು ಮಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಮಾತನಾಡಿದ ಅವರು, ದೆಹಲಿ ವಿಧಾನಾಭೆ ಚುನಾವಣೆ ಸ್ಪಷ್ಟ ಸಂದೇಶ ನೀಡಿದೆ. ಯಾರು ದೇಶದ ಬಗ್ಗೆ ಚಿಂತನೆ ಮಾಡುತ್ತಾರೆ. ದೇಶದ ಅಭಿವೃದ್ಧಿ ಮಾಡುತ್ತಾರೆ. ಯಾರು ದೇಶ ಕಟ್ಟುತ್ತಾರೆ ಅವರಿಗೆ ಜನ ಬೆಂಬಲ ಇದೆ ಎನ್ನುವುದು ಬಹಳ ಸ್ಪಷ್ಟವಾಗಿದೆ. ದೇಶದ ವಿಭಜನೆ ಬಗ್ಗೆ ದೇಶದ ಹಿತವನ್ನು ಮರೆತು ವಿದೇಶದಲ್ಲಿ ಮಾತನಾಡುವವರಿಗೆ ಜನರು ಪಾಠ ಕಲಿಸಿದ್ದಾರೆ ಎಂದರು.
ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ. ತಮ್ಮ ಸೋಲನ್ನು ಒಪ್ಪಿಕೊಳ್ಳದೇ ಕುಂಟು ನೆಪ ಹೇಳುವುದು ನಾಯಕನ ಲಕ್ಷಣವಲ್ಲ. ವಿರೋಧ ಪಕ್ಷಗಳು ನಿರಂತರವಾಗಿ ಈ ಆರೋಪವನ್ನು ಮಾಡುತ್ತಿವೆ ಎಂದು ಹೇಳಿದರು.