![](https://kannadadunia.com/wp-content/uploads/2024/04/bjp-bjp.png)
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಇನ್ನೇನು ಕೆಲವೇ ಹೊತ್ತಲ್ಲಿ ಪ್ರಕಟವಾಗಲಿದೆ. ಈವರೆಗಿನ ಮತ ಎಣಿಕೆಯಲ್ಲಿ ಬಿಜೆಪಿ ಭಾರಿ ಮುನ್ನಡೆ ಕಾಯ್ದುಕೊಂಡಿದ್ದು, ಆಡಳಿತಾರೂಢ ಆಮ್ ಆದ್ಮಿ ಪಕ್ಷ ಹಿನ್ನಡೆಯಲ್ಲಿದೆ.
ಬಿಜೆಪಿ 46 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಮ್ಯಾಜಿಕ್ ಸಂಖ್ಯೆಯನ್ನು ದಾಟಿದೆ. 27 ವರ್ಷಗಳ ಬಳಿಕ ದೆಹಲಿಯಲ್ಲಿ ಅಧಿಕಾರದ ಗದ್ದುಗೆ ಹಿಡಿಯುವತ್ತ ಬಿಜೆಪಿ ಮುನ್ನುಗ್ಗಿದೆ. ಆಮ್ ಆದ್ಮಿ ಪಕ್ಷ 23 ಕ್ಷೇತ್ರಗಳಲ್ಲಿ ಹಾಗೂ ಕಾಂಗ್ರೆಸ್ 1 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
ದೆಹಲಿ ಚುನವಾಣೆಯಲ್ಲಿ ಬಿಜೆಪಿ ಭಾರಿ ಮುನ್ನಡೆ ಸಾಧಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಬಿಜೆಪಿ ಕಚೇರಿ ಮುಂದೆ ಜಮಾವಣೆಗೊಂಡಿರುವ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ. ಸಿಹಿ ಹಂಚಿ ಪಕ್ಷದ ಪರ ಘೋಷಣೆಗಳನ್ನು ಕೂಗಿ, ಕುಣಿದು ಕುಪ್ಪಳಿಸಿ ಸಂಭ್ರಮಿಸಿದ್ದಾರೆ.