ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದ್ದು, ಅವರು ತಿಹಾರ್ ಜೈಲಿನಿಂದ ಹೊರ ಬಂದಿದ್ದಾರೆ. ಅವರಿಗೆ ಆಪ್ ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದ್ದಾರೆ.
ತಿಹಾರ್ ಜೈಲಿನಲ್ಲಿರುವಾಗಿನಿಂದ ನನ್ನ ಧೈರ್ಯ 100 ಪಟ್ಟು ಬೆಳೆದಿದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ತಿಹಾರ್ ಜೈಲಿನಿಂದ ಬಿಡುಗಡೆಯಾದ ನಂತರ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದು ನಾನು ಜೈಲಿನಿಂದ ಹೊರಬಂದಿದ್ದೇನೆ. ನನ್ನ ಧೈರ್ಯವು 100 ಪಟ್ಟು ಹೆಚ್ಚಾಗಿದೆ ಎಂದು ಹೇಳಲು ಬಯಸುತ್ತೇನೆ. ಅವರ ಜೈಲಿನ ಗೋಡೆಗಳು ಕೇಜ್ರಿವಾಲ್ ಅವರ ಧೈರ್ಯವನ್ನು ದುರ್ಬಲಗೊಳಿಸಲಾರವು ಎಂದು ಹೇಳಿದ್ದಾರೆ.
ನನಗೆ ಸರಿಯಾದ ಮಾರ್ಗವನ್ನು ತೋರಿಸಲು ನಾನು ದೇವರನ್ನು ಪ್ರಾರ್ಥಿಸುತ್ತೇನೆ. ದೇಶವನ್ನು ದುರ್ಬಲಗೊಳಿಸಲು ಮತ್ತು ದೇಶವನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ಎಲ್ಲಾ ಶಕ್ತಿಗಳ ವಿರುದ್ಧ ನಾನು ಹೋರಾಟವನ್ನು ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ.