ನವದೆಹಲಿ: ದೆಹಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದೆ ಎಂದು ಹೇಳಲಾಗಿದೆ.
ಮನೀಶ್ ಸಿಸೋಡಿಯಾ ಅವರನ್ನು ಗೃಹ ಬಂಧನದಲ್ಲಿರಿಸಲಾಗಿದೆ ಎಂದು ಆಪ್ ಆರೋಪಿಸಿದ್ದು, ಅವರನ್ನು ಬಂಧಿಸಿರುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸುಳಿವು ನೀಡಿದ್ದಾರೆ.
ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ವಿಚಾರಣೆಗೆ ಒಳಪಡಿಸುವ ಮುನ್ನ ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ. AAP ಮನೀಶ್ ಅವರ ಬಂಧನದ ಬಗ್ಗೆ ಆರೋಪಿಸಿದೆ.
ಮದ್ಯದ ನೀತಿ ಪ್ರಕರಣದಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಇಂದಿನ ಕೇಂದ್ರೀಯ ತನಿಖಾ ದಳ(ಸಿಬಿಐ) ವಿಚಾರಣೆಗೆ ಒಳಪಡಿಸುವ ಮೊದಲು, ಅವರ ಮನೆಯ ಹೊರಗೆ ನಾಲ್ಕು ಹಂತದ ಬ್ಯಾರಿಕೇಡ್‌ಗಳನ್ನು ಅಳವಡಿಸುವ ಮೂಲಕ ಮತ್ತು ಕ್ಷಿಪ್ರ ಕಾರ್ಯಪಡೆ(ಆರ್‌ಎಫ್‌ಎ) ನಿಯೋಜಿಸುವ ಮೂಲಕ ಭದ್ರತೆ ಹೆಚ್ಚಿಸಲಾಗಿದೆ.