ನವದೆಹಲಿ: ದೆಹಲಿ ಸರ್ಕಾರವು ಉಚಿತ ಪಡಿತರ ಯೋಜನೆಯನ್ನು ಇನ್ನೂ ಆರು ತಿಂಗಳವರೆಗೆ ವಿಸ್ತರಿಸಿದೆ. ಉಚಿತ ಪಡಿತರ ನೀಡುವ ಅವಧಿ ಮುಗಿದಿದ್ದು, ಆರು ತಿಂಗಳವರೆಗೆ ವಿಸ್ತರಿಸಲಾಗುತ್ತಿದೆ. ಈಗ ಇಲ್ಲಿನ ಜನರಿಗೆ ಉಚಿತ ಪಡಿತರ ನೀಡುವ ಸೌಲಭ್ಯವನ್ನು ಮೇ 31 ರವರೆಗೆ ವಿಸ್ತರಿಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಈ ನಿರ್ಧಾರವು ಸುಮಾರು 72.77 ಲಕ್ಷ ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ. ರಾಷ್ಟ್ರೀಯ ಆಹಾರ ಭದ್ರತಾ(NFS) ಕಾಯಿದೆ 2013 ರ ಅಡಿಯಲ್ಲಿ ಸೂಚಿಸಲಾದ ಅರ್ಹತೆಯ ಪ್ರಕಾರ, ವಲಸೆ ಕಾರ್ಮಿಕರು, ಅಸಂಘಟಿತ ಕಾರ್ಮಿಕರು, ಕಟ್ಟಡ ಕಾರ್ಮಿಕರು ಸೇರಿದಂತೆ ಅಗತ್ಯವಿರುವ ಜನರಿಗೆ 5 ಕೆಜಿ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಲಾಗುತ್ತದೆ.
ಮನೆ ಸಹಾಯಕರು ಮತ್ತು ಪಡಿತರ ಚೀಟಿ ಇಲ್ಲದವರಿಗೂ ಸೌಲಭ್ಯ ಕಲ್ಪಿಸಲಾಗುವುದು. ಪ್ರತಿ ವ್ಯಕ್ತಿಗೆ ತಿಂಗಳಿಗೆ 5 ಕೆಜಿ ಪಡಿತರದಲ್ಲಿ 4 ಕೆಜಿ ಗೋಧಿ ಮತ್ತು 1 ಕೆಜಿ ಅಕ್ಕಿ ನೀಡಲಾಗುವುದು. ಪಡಿತರ ಚೀಟಿ ಇಲ್ಲದ ವಲಸೆ ಕಾರ್ಮಿಕರು, ಅಸಂಘಟಿತ ಕಾರ್ಮಿಕರು, ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿರುವ ಕಾರ್ಮಿಕರು, ಗೃಹ ಸಹಾಯಕರು ಸೇರಿದಂತೆ ಎಲ್ಲ ನಿರ್ಗತಿಕರಿಗೆ ಸಂಪುಟದ ತೀರ್ಮಾನದಂತೆ ಪಡಿತರ ನೀಡಲಾಗುತ್ತಿದೆ.
ಈ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸುವಂತೆ ಮುಖ್ಯಮಂತ್ರಿಯವರು ನವೆಂಬರ್‌ನಲ್ಲಿ ಪ್ರಧಾನಿಗೆ ಪತ್ರ ಬರೆದಿದ್ದರು. ಕೇಂದ್ರವು ಪ್ರಧಾನ ಮಂತ್ರಿ ಗರೀಬ್ ಅನ್ನ ಯೋಜನೆಯನ್ನು ಮಾರ್ಚ್ 2022 ರವರೆಗೆ ವಿಸ್ತರಿಸಿದೆ.