ಭಾರತದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಸೋಂಕಿನ ಮಧ್ಯೆ, ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕಾರಿನಲ್ಲಿ ಏಕಾಂಗಿಯಾಗಿ ಪ್ರಯಾಣಿಸುವಾಗಲೂ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಕೋರ್ಟ್ ಹೇಳಿದೆ. ಕಾರನ್ನು ಸಾರ್ವಜನಿಕ ಸ್ಥಳವೆಂದು ಹೇಳಿರುವ ದೆಹಲಿ ಹೈಕೋರ್ಟ್, ಪ್ರತಿಯೊಬ್ಬ ವ್ಯಕ್ತಿಯು ಮಾಸ್ಕ್ ಧರಿಸಬೇಕೆಂದು ಹೇಳಿದೆ.
ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ವೈರಸ್ ವೇಗವಾಗಿ ಹರಡುತ್ತಿದೆ. ಮಂಗಳವಾರ 5100 ಹೊಸ ಪ್ರಕರಣಗಳು ವರದಿಯಾಗಿವೆ. 17 ಜನರು ಸಾವನ್ನಪ್ಪಿದ್ದಾರೆ. ದೆಹಲಿಯಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 17332 ಕ್ಕೆ ಏರಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಕಳೆದ 24 ಗಂಟೆಗಳಲ್ಲಿ 1 ಲಕ್ಷ 15 ಸಾವಿರ 736 ಜನರು ಕೊರೊನಾ ವೈರಸ್ ಗೆ ಒಳಗಾಗಿದ್ದಾರೆ. ಈ ಅವಧಿಯಲ್ಲಿ 630 ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಭಾರತದಲ್ಲಿ ಕೊರೊನಾ ಸೋಂಕಿಗೆ ಒಳಗಾದವರ ಸಂಖ್ಯೆ 1 ಕೋಟಿ 28 ಲಕ್ಷ 1 ಸಾವಿರ 785ಕ್ಕೆ ತಲುಪಿದೆ. 1 ಲಕ್ಷ 66 ಸಾವಿರ 177 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 59 ಸಾವಿರ 856 ಜನರು ಕೋವಿಡ್ – 19 ನಿಂದ ಚೇತರಿಸಿಕೊಂಡಿದ್ದಾರೆ.
ಕೊರೊನಾ ನಿಯಂತ್ರಣಕ್ಕೆ ಮಾಸ್ಕ್ ಹಾಗೂ ಸಾಮಾಜಿಕ ಅಂತರ, ಸ್ಯಾನಿಟೈಜರ್ ಬಳಕೆ ಬಹಳ ಮುಖ್ಯವಾಗಿದೆ.