alex Certify ಅಗ್ನಿ ಅವಘಡದಲ್ಲಿ 7 ಶಿಶುಗಳ ಸಾವಿನ ಬಳಿಕ ತಲೆಮರೆಸಿಕೊಂಡಿದ್ದ ದೆಹಲಿ ಬೇಬಿ ಕೇರ್ ಸೆಂಟರ್ ಮಾಲೀಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಗ್ನಿ ಅವಘಡದಲ್ಲಿ 7 ಶಿಶುಗಳ ಸಾವಿನ ಬಳಿಕ ತಲೆಮರೆಸಿಕೊಂಡಿದ್ದ ದೆಹಲಿ ಬೇಬಿ ಕೇರ್ ಸೆಂಟರ್ ಮಾಲೀಕ ಅರೆಸ್ಟ್

ನವದೆಹಲಿ: ದೆಹಲಿಯ ನ್ಯೂ ಬಾರ್ನ್ ಬೇಬಿ ಕೇರ್ ಆಸ್ಪತ್ರೆಯ ಮಾಲೀಕ ಡಾ.ನವೀನ್ ಖಿಚಿ ಅವರನ್ನು ಬಂಧಿಸಲಾಗಿದೆ.

ಆಸ್ಪತ್ರೆ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 7 ಶಿಶುಗಳು ಸಾವನ್ನಪ್ಪಿದ ಒಂದು ದಿನದ ನಂತರ ಭಾನುವಾರ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು 7 ನವಜಾತ ಶಿಶುಗಳ ಸಾವಿಗೆ ಕಾರಣವಾದ ಪೂರ್ವ ದೆಹಲಿಯ ಮಕ್ಕಳ ಆಸ್ಪತ್ರೆಯ ಅಗ್ನಿ ದುರಂತದ ಕುರಿತು ತನಿಖೆ ನಡೆಸುವಂತೆ ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್ ಅವರಿಗೆ ನಿರ್ದೇಶನ ನೀಡಿದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ನಡೆದಿದೆ.

ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿನ ಬೇಬಿ ಕೇರ್ ನ್ಯೂ ಬಾರ್ನ್ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ 11:30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡು 7 ನವಜಾತ ಶಿಶುಗಳು ಸಾವನ್ನಪ್ಪಿದ್ದವು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...