ನವದೆಹಲಿ: UAPA ಅಡಿಯಲ್ಲಿ ಲೇಖಕಿ ಅರುಂಧತಿ ರಾಯ್ ವಿರುದ್ಧ ಕಾನೂನು ಕ್ರಮ ಜರುಗಿಸಲು ದೆಹಲಿ LG ಅನುಮೋದಿಸಿದ್ದಾರೆ.
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು 2010 ರಲ್ಲಿ ಕಾರ್ಯಕ್ರಮವೊಂದರಲ್ಲಿ ‘ಪ್ರಚೋದನಕಾರಿ’ ಭಾಷಣಕ್ಕಾಗಿ ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಅಡಿಯಲ್ಲಿ ಲೇಖಕಿ ಅರುಂಧತಿ ರಾಯ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಶುಕ್ರವಾರ ಅನುಮತಿ ನೀಡಿದ್ದಾರೆ ಎಂದು ಹೇಳಲಾಗಿದೆ.
ಅಕ್ಟೋಬರ್ 21, 2010 ರಂದು ‘ಆಜಾದಿ-ದಿ ಓನ್ಲಿ ವೇ’ ಬ್ಯಾನರ್ ಅಡಿಯಲ್ಲಿ ರಾಜಕೀಯ ಕೈದಿಗಳ ಬಿಡುಗಡೆಗಾಗಿ ಸಮಿತಿಯು ಸಮ್ಮೇಳನವನ್ನು ಆಯೋಜಿಸಿತ್ತು. ಬೂಕರ್ ಪ್ರಶಸ್ತಿ ವಿಜೇತ ಲೇಖಕರು ಸಮಾರಂಭದಲ್ಲಿ ಭಾಷಣಕಾರರಲ್ಲಿ ಒಬ್ಬರಾಗಿದ್ದರು. ರಾಯ್ ಮತ್ತು ಇತರ ಭಾಷಣಕಾರರು ಸಮ್ಮೇಳನದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಎಫ್‌ಐಆರ್ ದಾಖಲಿಸಲಾಗಿತ್ತು.
ಈ ಕುರಿತಾಗಿ ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.