ನವದೆಹಲಿ: ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಅನಿಲ್ ಬೈಜಾಲ್ ಬುಧವಾರ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣ ನೀಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಜೀಬ್ ಜಂಗ್ ಅವರ ಹಠಾತ್ ರಾಜೀನಾಮೆಯ ನಂತರ 2016 ರಲ್ಲಿ ಡಿಸೆಂಬರ್ 31 ರಂದು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಅನಿಲ್ ಬೈಜಾಲ್ ಅವರು ಅಧಿಕಾರ ವಹಿಸಿಕೊಂಡರು.
ಅನಿಲ್ ಬೈಜಾಲ್ ಅವರು ಡಿಸೆಂಬರ್ 31, 2021 ರಂದು ಐದು ವರ್ಷಗಳ ಅಧಿಕಾರವನ್ನು ಪೂರ್ಣಗೊಳಿಸಿದರು. ದೆಹಲಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಯಾವುದೇ ನಿಶ್ಚಿತ ಅಧಿಕಾರಾವಧಿ ಇಲ್ಲ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಹಲವು ವಿಷಯಗಳ ಬಗ್ಗೆ ಅನಿಲ್ ಬೈಜಾಲ್ ಅವರು ಭಿನ್ನಾಭಿಪ್ರಾಯ ಹೊಂದಿದ್ದರು.