ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಇಂದು ಮತ್ತೆ ಸಮನ್ಸ್ ಜಾರಿ ಮಾಡಿದೆ.
2021-22ರ ಅಬಕಾರಿ ನೀತಿಯಿಂದ ಉದ್ಭವಿಸುವ ಮನಿ ಲಾಂಡರಿಂಗ್ ಪ್ರಕರಣದ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ. ದೆಹಲಿ ಮುಖ್ಯಮಂತ್ರಿಗೆ ಇದು ಆರನೇ ಸಮನ್ಸ್ ಆಗಿದೆ. ಈ ಪ್ರಕರಣದಲ್ಲಿ ಅವರು ಈ ಹಿಂದೆ ಐದು ಬಾರಿ ವಿಚಾರಣೆಗೆ ಹಾಜರಾಗಿಲ್ಲ. ಫೆಬ್ರವರಿ 19 ರಂದು ಫೆಡರಲ್ ಏಜೆನ್ಸಿಯ ಮುಂದೆ ಹಾಜರಾಗುವಂತೆ ಕೇಜ್ರಿವಾಲ್ ಗೆ ಸಮನ್ಸ್ ನೀಡಲಾಗಿದೆ.
ಈ ಹಿಂದೆ, ಈ ವಿಷಯದಲ್ಲಿ ಸಮನ್ಸ್ ತಪ್ಪಿಸಿಕೊಂಡಿದ್ದಕ್ಕಾಗಿ ಇಡಿ ಸಲ್ಲಿಸಿದ ದೂರಿಗೆ ಪ್ರತಿಕ್ರಿಯೆಯಾಗಿ ಫೆಬ್ರವರಿ 17 ರಂದು ಹಾಜರಾಗುವಂತೆ ದೆಹಲಿ ನ್ಯಾಯಾಲಯವು ಕೇಜ್ರಿವಾಲ್ ಅವರಿಗೆ ನಿರ್ದೇಶನ ನೀಡಿತ್ತು.