ನವದೆಹಲಿ : ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ, ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಏ.18 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಆರೋಪಿಗಳ ಕಡೆಯಿಂದ ವಿಚಾರಣೆ ವಿಳಂಬವಾಗಿದೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಲೇವಾರಿ ಮಾಡಿದೆ. ನ್ಯಾಯಾಲಯವು ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 6 ರವರೆಗೆ ವಿಸ್ತರಿಸಿತ್ತು, ಇದೀಗ ಏ.18 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನಕ್ಕೊಳಗಾಗಿದ್ದು, ತಿಹಾರ್ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಇದೀಗ ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಜೈಲುಶಿಕ್ಷೆ ಮುಂದುವರೆದಿದ್ದು, ಏ.18 ರರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ದೆಹಲಿ ಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ ಎಎಪಿ ನಾಯಕರಿಗೆ ಸಂಕಷ್ಟ ಎದುರಾಗಿದೆ.