ದೆಹಲಿಯ ನಾಗರಿಕ ಸಂಸ್ಥೆ ನಡೆಸುವ ಮಲ್ಟಿ-ಲೆವೆಲ್ ಪಾರ್ಕಿಂಗ್‌ನಲ್ಲಿ ನಿಲ್ಲಿಸಲಾಗಿದ್ದ ಕಾರಿಗೆ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ್ದು, ಬೆಂಕಿಯಲ್ಲಿ 20 ಕಾರುಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ.
ದೆಹಲಿಯ ಸುಭಾಷ್ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ವಿಷಯ ತಿಳಿದ ತಕ್ಷಣ ಏಳು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದೆ.
ಪಾರ್ಕಿಂಗ್ ಸ್ಥಳದಲ್ಲಿ ಅಳವಡಿಸಲಾದ ಸಿಸಿ ಟಿವಿಯಲ್ಲಿ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಹೋಂಡಾ ಸಿಆರ್‌ವಿಯಲ್ಲಿ ಬಂದು ನಿಲ್ಲಿಸಿದ್ದ ಎರ್ಟಿಗಾ ಟೈರ್‌ಗೆ ಬೆಂಕಿ ಹಚ್ಚುತ್ತಿರುವುದು ಕಂಡುಬಂದಿದೆ. ನಂತರ ಆತ ಅದೇ ಕಾರಿನಲ್ಲಿ ವಾಪಸ್ ಹೋಗಿದ್ದಾನೆ.
ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ. ಘಟನೆ ನಡೆದ ನಂತರ ಪೊಲೀಸರು ಕಾರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ವ್ಯಕ್ತಿಯನ್ನು ಸುಭಾಷ್ ನಗರದ ನಿವಾಸಿ 23 ವರ್ಷದ ಯಶ್ ಅರೋರಾ ಎಂದು ಗುರುತಿಸಿದ್ದಾರೆ. ಆತನನ್ನು ಬಂಧಿಸಲಾಗಿದೆ.
ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಎರ್ಟಿಗಾ ಮಾಲೀಕ ಇಶಾನ್ ಮೇಲೆ ಸೇಡು ತೀರಿಸಿಕೊಳ್ಳಲು ಬಯಸಿದ್ದರಿಂದ ಹೀಗೆ ಮಾಡಿದ್ದೇನೆ ಎಂದಿದ್ದಾನೆ.