ಮುಂಬೈ ಪೊಲೀಸರು ಗರ್ಭಿಣಿ ಅಪ್ರಾಪ್ತ ಬಾಲಕಿಯೊಂದಿಗೆ ದೆಹಲಿಯ 21 ವರ್ಷದ ವ್ಯಕ್ತಿಯನ್ನು ಪತ್ತೆ ಹಚ್ಚಿ ತನಿಖೆ ಆರಂಭಿಸಿದ ನಂತರ ಆತನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ತಾರ್ಡಿಯೊದಲ್ಲಿ ‘ನಾಕಾ ಬಂದಿ’ (ರಸ್ತೆ ತಪಾಸಣೆ) ನಡೆಸುತ್ತಿದ್ದ ಪೊಲೀಸರು ಈ ಜೋಡಿಯನ್ನು ಪತ್ತೆ ಮಾಡಿದ್ದಾರೆ. “16 ವರ್ಷದ ಬಾಲಕಿ ಗರ್ಭಿಣಿಯಾಗಿದ್ದಾಳೆ ಎಂದು ನಮಗೆ ಅರಿವಾಯಿತು. ನಾವು ಆಕೆಯನ್ನು ಪ್ರಶ್ನಿಸಿದಾಗ, ದೆಹಲಿಯಲ್ಲಿ 21 ವರ್ಷದ ವ್ಯಕ್ತಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆಂದು ತಿಳಿದುಬಂದಿದೆ.
ಆಕೆ ಗರ್ಭಿಣಿಯಾದ ನಂತರ ಆತ ಆಕೆಯನ್ನು ಮುಂಬೈಗೆ ಕರೆತಂದಿದ್ದ. ನಂತರ ನಾವು ಭಾರತೀಯ ನ್ಯಾಯ ಸಂಹಿತೆ ಮತ್ತು ಮಕ್ಕಳ ಲೈಂಗಿಕ ದೌರ್ಜನ್ಯದಿಂದ ರಕ್ಷಣೆ ಕಾಯ್ದೆಯಡಿ (ಪೋಕ್ಸೊ) ಆ ವ್ಯಕ್ತಿಯನ್ನು ಬಂಧಿಸಿದ್ದೇವೆ” ಎಂದು ಅಧಿಕಾರಿ ಹೇಳಿದರು.
ಬಾಲಕಿಯ ಮೇಲೆ ದೆಹಲಿಯಲ್ಲಿ ಅತ್ಯಾಚಾರ ನಡೆದಿದ್ದರಿಂದ ಈ ಪ್ರಕರಣವನ್ನು ದೆಹಲಿ ಪೊಲೀಸರಿಗೆ ವರ್ಗಾಯಿಸಲಾಗಿದೆ ಎಂದು ಅವರು ತಿಳಿಸಿದರು.