ನವದೆಹಲಿ: ದುರದೃಷ್ಟಕರ ಘಟನೆಯೊಂದರಲ್ಲಿ ಈಶಾನ್ಯ ದೆಹಲಿಯ ಸೀಲಂಪುರ್ ಪ್ರದೇಶದಲ್ಲಿ ಮೋಟಾರ್ ಸೈಕಲ್ ನಲ್ಲಿ ಹಿಂಬದಿ ಸವಾರಿ ಮಾಡುತ್ತಿದ್ದ 25 ವರ್ಷದ ವ್ಯಕ್ತಿಯೊಬ್ಬರು ಮಾಂಜಾದಿಂದ ಗಾಯಗೊಂಡಿದ್ದಾರೆ.
ಶುಕ್ರವಾರ ಪರ್ಮಾನಂದ್ ಮೌರ್ಯ ಎಂಬ ವ್ಯಕ್ತಿ ತನ್ನ ಸ್ನೇಹಿತ ಗೌರವ್ ಕುಮಾರ್ ಹಿಂದೆ ಮೋಟಾರ್ ಸೈಕಲ್ನಲ್ಲಿ ಸವಾರಿ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಮುಖಕ್ಕೆ ಗಾಯಗಳಾಗಿರುವ ಒಬ್ಬ ವ್ಯಕ್ತಿಯನ್ನು ಲೋಕನಾಯಕ ಆಸ್ಪತ್ರೆಗೆ ದಾಖಲಿಸಿರುವ ಕುರಿತು ಶುಕ್ರವಾರ ಸೀಲಾಂಪುರ ಪೊಲೀಸ್ ಠಾಣೆಗೆ ಮಾಹಿತಿ ಲಭಿಸಿದೆ ಎಂದು ಉಪ ಪೊಲೀಸ್ ಆಯುಕ್ತ(ಈಶಾನ್ಯ) ಜಾಯ್ ಟಿರ್ಕಿ ತಿಳಿಸಿದ್ದಾರೆ.
ಪರಿಶೀಲಿಸಿದಾಗ ಸೀಲಂಪುರದ ನಿವಾಸಿ ಪರಮಾನಂದ ಮೌರ್ಯ ಅವರ ಎಡ ಕೆನ್ನೆ ಮತ್ತು ಮೂಗಿನ ಮೇಲೆ ಛೇದಿತ ಗಾಯಗಳಾಗಿದ್ದು, ದಾಖಲಾಗಿದ್ದಾರೆ. ಗೌರವ್ ಹೆಲ್ಮೆಟ್ ಧರಿಸಿದ್ದರೆ, ಪರಮಾನಂದ ಹೆಲ್ಮೆಟ್ ಇಲ್ಲದೆ ಸವಾರಿ ಮಾಡುತ್ತಿದ್ದರು. ಮಾಂಜಾ ಪತ್ತೆಯಾಗಿಲ್ಲ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.