
ನವದೆಹಲಿ: ಓಖ್ಲಾದಿಂದ ತುಘಲಕಾಬಾದ್ ಬ್ಲಾಕ್ ವಿಭಾಗಕ್ಕೆ ಹೋಗುವ 2280 ತಾಜ್ ಎಕ್ಸ್ ಪ್ರೆಸ್ ರೈಲಿನ ಕೋಚ್ ನಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿದೆ.
ಬೆಂಕಿ ಅವಘಡದ ಬಗ್ಗೆ ಮಾಹಿತಿ ಬಂದ ಕೂಡಲೇ ಕ್ರಮ ಕೈಗೊಳ್ಳಲಾಗಿದ್ದು, ರೈಲಿನ ಇತರ ವಿಭಾಗಗಳನ್ನು ಲಗೇಜ್ ವಿಭಾಗದಿಂದ ಬೇರ್ಪಡಿಸಲಾಗಿದೆ. ದೆಹಲಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಇತರ ಅಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ತಾಜ್ ಎಕ್ಸ್‌ಪ್ರೆಸ್ ರೈಲಿನ ನಾಲ್ಕು ಕೋಚ್ ಗಳಲ್ಲಿ ಬೆಂಕಿ ಕಾಣಿಸಿಕೊಂಡಿರುವ ಕುರಿತು ನಮಗೆ ಸಂಜೆ 4.24 ಕ್ಕೆ ಕರೆ ಬಂದಿತು. ಎಂಟು ಅಗ್ನಿಶಾಮಕ ವಾಹನಗಳನ್ನು ಬೆಂಕಿ ನಂದಿಸಲು ಬಳಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ(DFS) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಯಾವುದೇ ಸಾವು ನೋವುಗಳ ವರದಿಗಳು ಇಲ್ಲಿಯವರೆಗೆ ಬಂದಿಲ್ಲ. ಸ್ಥಳದಲ್ಲಿ ಅಗ್ನಿಶಾಮಕ ದಳದ ತಂಡ ಬೆಂಕಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.