ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯಲ್ಲಿ ಕಳೆದ 15 ವರ್ಷಗಳಿಂದ ಅಧಿಕಾರದಲ್ಲಿದ್ದ ಬಿಜೆಪಿಗೆ ಮುಖಂಭಂಗವಾಗಿದೆ.
ಆಮ್ ಆದ್ಮಿ ಪಕ್ಷ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 134 ಸ್ಥಾನ ಗಳಿಸಿ ಅಧಿಕಾರ ಹಿಡಿದಿದೆ. 250 ವಾರ್ಡ್ ಗಳ ಪೈಕಿ 134 ವಾರ್ಡ್ ಗಳಲ್ಲಿ ಆಮ್ ಆದ್ಮಿ ಪಕ್ಷ ಜಯಭೇರಿ ಬಾರಿಸಿದ್ದು, ಕಳೆದ 15 ವರ್ಷಗಳಿಂದ ಆಡಳಿತದಲ್ಲಿದ್ದ ಬಿಜೆಪಿಗೆ ಮುಖಭಂಗವಾಗಿದೆ. ಆಡಳಿತಾರೂಢ ಬಿಜೆಪಿ 104 ವಾರ್ಡ್ ಗಳಲ್ಲಿ ಮಾತ್ರ ಜಯಗಳಿಸಿದೆ. ಕಾಂಗ್ರೆಸ್ 9 ಹಾಗೂ ಪಕ್ಷೇತರರು 3 ವಾರ್ಡ್ ಗಳಲ್ಲಿ ಗೆಲುವು ಸಾಧಿಸಿದ್ದಾರೆ.
ದೆಹಲಿಯ 250 ವಾರ್ಡ್ ಗಳಿಗೆ ಡಿಸೆಂಬರ್ 4 ರಂದು ಮತದಾನ ನಡೆದಿದ್ದು, ಚುನಾವಣೋತ್ತರ ಸಮೀಕ್ಷೆಯಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಜಯಗಳಿಸಲಿದೆ ಎಂದು ಹೇಳಲಾಗಿತ್ತು. ಅಂತೆಯೇ ಆಪ್ ಅಧಿಕಾರಕ್ಕೇರಿದೆ.