
ನವದೆಹಲಿ: ನೈಋತ್ಯ ದೆಹಲಿಯ ದಾಬ್ರಿ ಪ್ರದೇಶದಲ್ಲಿ 40 ವರ್ಷದ ವ್ಯಕ್ತಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿ ಭಾನುವಾರ ಸಾವನ್ನಪ್ಪಿದ್ದಾನೆ.
ತನ್ನ ಅಪ್ರಾಪ್ತ ಮಲಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಶಂಕೆಯ ಮೇರೆಗೆ ಸಾರ್ವಜನಿಕರು ಆತನಿಗೆ ಥಳಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಸ್ಥಳಕ್ಕೆ ತಲುಪುವ ಮೊದಲೇ ಆರೋಪಿಯನ್ನು ಸಾರ್ವಜನಿಕರು ಥಳಿಸಿದ್ದಾರೆ. ಅತ್ಯಾಚಾರದ ಆರೋಪದ ಮೇಲೆ ಆತನನ್ನು ಬಂಧಿಸಲಾಗಿತ್ತು. 5 ವರ್ಷದ ಸಂತ್ರಸ್ತೆಯ ತಾಯಿ ತನ್ನ ಎರಡನೇ ಪತಿ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿದ್ದಾಳೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವ್ಯಕ್ತಿಯನ್ನು ಬಂಧಿಸಿದ ನಂತರ ಪೊಲೀಸರು ಹರಿ ನಗರದ ಡಿಡಿಯು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದರು, ವೈದ್ಯಕೀಯ ಪರೀಕ್ಷೆ ಬಳಿಕ ಜೈಲಿಗೆ ಕರೆ ತಂದ ನಂತರ ಆತನ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.