ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಸ್ರೇಲ್ ರಾಯಭಾರ ಕಚೇರಿ ಹಿಂದ ಬಾಂಬ್ ಸ್ಪೋಟವಾಗಿದೆ. ರಾಜತಾಂತ್ರಿಕ ಕಚೇರಿಗಳು ಇರುವ ಚಾಣಕ್ಯಪುರಿ ಪ್ರದೇಶದಲ್ಲಿ ನೆಲೆಗೊಂಡಿರುವ ಇಸ್ರೇಲಿ ರಾಯಭಾರ ಕಚೇರಿಯ ಹಿಂದೆ ಸ್ಫೋಟ ಸಂಭವಿಸಿದೆ ಎನ್ನಲಾಗಿದ್ದು, ದೆಹಲಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಇಂದು ಸಂಜೆ 6 ಗಂಟೆ ಸುಮಾರಿಗೆ ದೆಹಲಿ ಅಗ್ನಿಶಾಮಕ ಸೇವೆಗೆ ಅಪರಿಚಿತ ಕರೆ ಮಾಡಿದ ಕರೆಯಲ್ಲಿ ಸ್ಫೋಟದ ಬಗ್ಗೆ ಅಧಿಕಾರಿಗಳಿಗೆ ವರದಿಯಾಗಿದೆ. ಇಸ್ರೇಲಿ ರಾಯಭಾರ ಕಚೇರಿಯ ಹಿಂದೆ ಖಾಲಿ ಜಾಗದಲ್ಲಿ ಸ್ಫೋಟ ಸಂಭವಿಸಿದೆ ಎಂದು ಕರೆ ಮಾಡಿದವರು ಹೇಳಿದ್ದಾರೆ.
ನಂತರ ಬಾಂಬ್ ಸ್ಕ್ವಾಡ್ನೊಂದಿಗೆ ಪೊಲೀಸರ ವಿಶೇಷ ತಂಡವು ಪರಿಶೀಲನೆಗಾಗಿ ಸ್ಥಳಕ್ಕೆ ತಲುಪಿತು. ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಕರೆ ಮಾಡಿದವರ ಗುರುತು, ಮತ್ತು ಉದ್ದೇಶವು ಪ್ರಸ್ತುತ ತನಿಖೆಯಲ್ಲಿದೆ. ವಿವರವಾದ ತನಿಖೆ ನಡೆಯುತ್ತಿದೆ.
ದೆಹಲಿ ಅಗ್ನಿಶಾಮಕ ಸೇವೆಗೆ ಇಂದು ಸಂಜೆ ಚಾಣಕ್ಯಪುರಿ ಪ್ರದೇಶದಲ್ಲಿ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟದ ಕರೆ ಬಂದಿದೆ. ಇಲ್ಲಿಯವರೆಗೆ ಸ್ಥಳದಲ್ಲಿ ಏನೂ ಪತ್ತೆಯಾಗಿಲ್ಲ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ನಿರ್ದೇಶಕ ಅತುಲ್ ಗಾರ್ಗ್ ಹೇಳಿದ್ದಾರೆ.