
ದೆಹಲಿಯ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ. ಇಲ್ಲಿನ ಪಿವಿಆರ್ ಬಳಿ ಏಕಾಏಕಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ. ನವೆಂಬರ್ 20ರಂದು ಕೂಡ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿತ್ತು. ಇದರ ಬೆನ್ನಲ್ಲೇ ಒಂದೇ ವಾರದಲ್ಲಿ ಇದೀಗ ಮತ್ತೊಂದು ಸ್ಫೋಟ ಸಂಭವಿಸಿದ್ದು, ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಬೆಳಿಗ್ಗೆ 11:50ರ ಸುಮಾರಿಗೆ ಈ ಸ್ಫೋಟ ಸಂಭವಿಸಿದೆ. ಘಟನಾ ಸ್ಥಳದಲ್ಲಿ ಪುಡಿಯಂತಹ ವಸ್ತುಗಳು ಪತ್ತೆಯಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.