
ನವದೆಹಲಿ: ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪತ್ತೆಯಾದ ‘ಶಿವಲಿಂಗ’ದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಕ್ಕಾಗಿ ದೆಹಲಿ ವಿಶ್ವವಿದ್ಯಾಲಯದ ಹಿಂದೂ ಕಾಲೇಜಿನ ಸಹ ಪ್ರಾಧ್ಯಾಪಕ ರತನ್ ಲಾಲ್ ಅವರನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸಿದ ಹಿನ್ನಲೆಯಲ್ಲಿ ದೆಹಲಿ ಉತ್ತರ ಸೈಬರ್ ಪೊಲೀಸ್ ಠಾಣೆ ಪೊಲೀಸರು ರತನ್ ಲಾಲ್ ಅವರನ್ನು ಬಂಧಿಸಿದ್ದಾರೆ. ದೆಹಲಿ ಮೂಲದ ವಕೀಲ ವಿನೀತ್ ಜಿಂದಾಲ್ ನೀಡಿದ ದೂರಿನ ಆಧಾರದ ಮೇಲೆ ಮಂಗಳವಾರ ರಾತ್ರಿ ರತನ್ ಲಾಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.