ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಲವು ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ರಸ್ತೆಗಳು ಜಲಾವೃತವಾಗಿವೆ.
ರಾತ್ರಿಯಿಡಿ ಸುರಿದ ಭಾರೀ ಮಳೆಯಿಂದಾಗಿ ದೆಹಲಿ-ಎನ್‌ಸಿಆರ್‌ನ ಹಲವಾರು ಭಾಗಗಳು ಜಲಾವೃತವಾಗಿದೆ. ಮುಂಜಾನೆ 5.30ರ ಸುಮಾರಿಗೆ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ಮೇಲ್ಛಾವಣಿ ಕುಸಿದಿದೆ. ಟರ್ಮಿನಲ್ -1 ನಲ್ಲಿ ಛಾವಣಿ ಕುಸಿದು 6 ಜನ ಗಾಯಗೊಂಡಿದ್ದಾರೆ, ಎಲ್ಲರನ್ನೂ ರಕ್ಷಿಸಲಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆ ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯ ಕೆಲವು ಭಾಗಗಳಲ್ಲಿ ಇನ್ನೂ ಮಳೆ ಸುರಿಯುತ್ತಿರುವುದರಿಂದ ITO ನಲ್ಲಿ ಸಂಚಾರ ದಟ್ಟಣೆ ಕಂಡುಬಂದಿದೆ. ದೆಹಲಿಯ ಕೆಲವು ಭಾಗಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಮಳೆಯಿಂದಾಗಿ ನೀರಿನಲ್ಲಿ ಕಾರ್, ಟ್ರಕ್ ಗಳು ಸೇರಿ ವಾಹನಗಳು ಮುಳುಗಿವೆ. ಕೆಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜನ ಜೀವನ ಅಸ್ತವ್ಯಸ್ತಗೊಂಡಿದೆ.