alex Certify Shocking News: ಬೀದಿ ನಾಯಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ; ಸಿಸಿ ಟಿವಿಯಲ್ಲಿ ಸೆರೆಯಾಯ್ತು ಆಘಾತಕಾರಿ ದೃಶ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking News: ಬೀದಿ ನಾಯಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ; ಸಿಸಿ ಟಿವಿಯಲ್ಲಿ ಸೆರೆಯಾಯ್ತು ಆಘಾತಕಾರಿ ದೃಶ್ಯ

ಕಾಮುಕನೊಬ್ಬ ನಾಯಿಯ ಮೇಲೆ ಅತ್ಯಾಚಾರವೆಸಗಿದ ಅಮಾನುಷ ಘಟನೆಯೊಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ. ಈ ಪಾಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಆರೋಪಿ ಪವನ್​ ಮಲ್ಹೋತ್ರಾ ಖಾಸಗಿ ಸಂಸ್ಥೆಯೊಂದರಲ್ಲಿ ಒಳ್ಳೆಯ ಹುದ್ದೆಯಲ್ಲಿದ್ದ ಎನ್ನಲಾಗಿದೆ. ಈತನು ಶ್ವಾನದ ಮೇಲೆ ಅತ್ಯಾಚಾರವೆಸಗುತ್ತಿರುವ ವಿಡಿಯೋ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದ್ದು ಇದನ್ನು ನೋಡಿದ ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ.

ಹಲವಾರು ಪ್ರಾಣಿ ಪ್ರಿಯರು ಈ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡುತ್ತಿದ್ದು ದೇಶದಲ್ಲಿ ಹೆಣ್ಣು ಪ್ರಾಣಿಗಳೂ ಸುರಕ್ಷಿತವಾಗಿಲ್ಲ ಎಂದು ಆಕ್ರೋಶ ಹೊರ ಹಾಕುತ್ತಿದ್ದಾರೆ.

ವಿಡಿಯೋದಲ್ಲಿ ಅರೆಬೆತ್ತಲೆಯಾಗಿದ್ದ ಪವನ್ ಮಲ್ಹೋತ್ರಾ ತನ್ನ ಕುಕೃತ್ಯವನ್ನು ನಡೆಸಿದ್ದಾರೆ. ಇದು ಪ್ರಾಣಿಗಳ ಸುರಕ್ಷತೆ ಬಗ್ಗೆ ಪ್ರಶ್ನೆ ಎತ್ತುವಂತೆ ಮಾಡಿದೆ.

ಆರೋಪಿ ಪವನ್​ ವಿರುದ್ಧ ಭಾರತೀಯ ದಂಡ ಸಂಹಿತೆ 377ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಎಬಿ ಹೆಸರಿನ ಪೀಪಲ್​ ಫಾರ್​​ ಎನಿಮಲ್ಸ್​ ಸದಸ್ಯರೊಬ್ಬರು ರಜೌರಿ ಗಾರ್ಡನ್​ ಪೊಲೀಸ್​ ಠಾಣೆಯಲ್ಲಿ ಸೆಪ್ಟೆಂಬರ್​ 14ರಂದು ಎಫ್​ಐಆರ್​ ದಾಖಲಿಸಿದ್ದಾರೆ.

ಪವನ್​ ಪದೇ ಪದೇ ಬೀದಿ ನಾಯಿಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಇವನ ಮೇಲೆ ಈಗಲೇ ಸೂಕ್ತ ಕ್ರಮ ಜರುಗಿಸದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಈತ ಮಹಿಳೆಯರ ಮೇಲೂ ಭೀಕರ ದೌರ್ಜನ್ಯ ಎಸಗುತ್ತಾನೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ,

(Warning: Video contains content inappropriate for certain audiences. Viewer discretion is recommended)

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...