ನವದೆಹಲಿ: ಮಕ್ಕಳ ಎದುರೇ ತಾಯಿಯನ್ನು ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಅಮಾನುಷವಾಗಿ ಕೊಂದಿರುವ ದಾರುಣ ಘಟನೆ ನೈಋತ್ಯ ದೆಹಲಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಆರತಿ ಎಂದು ಗುರುತಿಸಲಾಗಿದೆ. ಆರೋಪಿ ಪರಾರಿಯಾಗಿದ್ದು, ಆತ ಕೊಲೆಯಾದ ಮಹಿಳೆಗೆ ಪರಿಚಯವಿರುವ ವ್ಯಕ್ತಿ ಎಂದು ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ವಶಪಡಿಸಿಕೊಂಡಿರುವ ಸಿಸಿ ಟಿವಿ ದೃಶ್ಯಾವಳಿಗಳಲ್ಲಿ ಆರೋಪಿಗಳು ಸಂತ್ರಸ್ತೆಯನ್ನು ಬೆನ್ನಟ್ಟಿದ್ದು, ಆಕೆ ಮಕ್ಕಳೊಂದಿಗೆ ತಪ್ಪಿಸಿಕೊಳ್ಳಲು ಓಡುತ್ತಿರುವುದನ್ನು ಕಾಣಬಹುದಾಗಿದೆ. ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಮತ್ತೊಂದು ಟ್ವಿಸ್ಟ್; ಬ್ಲೂಟೂತ್ ಬಳಸಿ ಪರೀಕ್ಷೆ ಬರೆದಿದ್ದನಾ ಅಭ್ಯರ್ಥಿ….?
ಮಧ್ಯಾಹ್ನ 2 ಗಂಟೆಗೆ ಸಾಗರ್ ಪುರ್ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರಿಗೆ ಇರಿದು ಕೊಂದಿರುವ ಬಗ್ಗೆ ಪಿಸಿಆರ್ ಕರೆ ಬಂದಿತು. ನಾವು ತಕ್ಷಣ ಸ್ಥಳಕ್ಕೆ ತಲುಪಿದೆವು. ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.