ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಶೇ. 27.5 ರಷ್ಟು ಹೆಚ್ಚಳ, ವಾರದಲ್ಲಿ ಐದು ದಿನ ಕೆಲಸ ಸೇರಿ ಹಲವು ಶಿಫಾರಸುಗಳ ಮಾಡಿರುವ 7ನೇ ವೇತನ ಆಯೋಗದ ವರದಿಯನ್ನು ಯಥಾವತ್ ಜಾರಿ ಮಾಡುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಒತ್ತಾಯಿಸಿದೆ.
ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಕುರಿತಾಗಿ ಮನವಿ ಮಾಡಲಾಗಿದೆ.
ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರರಾವ್ ನೇತೃತ್ವದ ಏಳನೇ ವೇತನ ಆಯೋಗ ಉತ್ತಮವಾದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ವರದಿಯನ್ನು ಲೋಕಸಭೆ ಚುನಾವಣೆ ನೀತಿ ಸಂಹಿತೆ ಮೊದಲೇ ಜಾರಿಗೊಳಿಸುವ ವಿಶ್ವಾಸವಿತ್ತು. ಆದರೆ, ಸಾಧ್ಯವಾಗಿಲ್ಲ. ನೌಕರರ ಬೇಡಿಕೆ ಅನ್ವಯ 7ನೇ ವೇತನ ಆಯೋಗ ವರದಿಯನ್ನು ಯಥಾವತ್ತಾಗಿ ಜಾರಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.