ಬೆಳಗಾವಿ: ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡುವ ಬೇಡಿಕೆಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟಗಳು ಸಲ್ಲಿಸಿರುವ ಬೇಡಿಕೆಗಳ ಕುರಿತು ಪರಿಶೀಲಿಸಲಾಗಿದ್ದು, ವರದಿಯನ್ನು ಸಲ್ಲಿಸಲು 3 ತಿಂಗಳ ಕಾಲಾವಕಾಶ ನೀಡಲಾಗಿದೆ. ಸಮಿತಿ ವರದಿ ಸಲ್ಲಿಸಿದ ನಂತರ ಬೇಡಿಕೆಗಳ ಕುರಿತು ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.