ಹುಬ್ಬಳ್ಳಿ: ಸಾರಿಗೆ ನೌಕರರಿಗೂ ಏಳನೇ ವೇತನ ಆಯೋಗ ಜಾರಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸೇನೆ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಸಾರಿಗೆ ನೌಕರರಿಗೆ ಏಳನೇ ವೇತನ ಆಯೋಗದ ವರದಿಯಂತೆ ವೇತನ ನೀಡುವುದಾಗಿ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಅಧಿಕಾರಕ್ಕೆ ಬಂದ ನಂತರ ಕೊಟ್ಟ ಮಾತು ತಪ್ಪಿದೆ ಎಂದು ಆರೋಪಿಸಿದ್ದಾರೆ.
ರಾಜ್ಯ ಸಾರಿಗೆ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಘೋಷಿಸಬೇಕು. 7ನೇ ವೇತನ ಆಯೋಗದ ಪ್ರಕಾರ ಸೌಲಭ್ಯ ನೀಡದೆ ಬರೀ ವೇತನ ಪರಿಷ್ರಣೆಗೆ ಕ್ರಮ ಕೈಗೊಂಡರೆ ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.
ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಜನವರಿ 13ರಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿಗೆ ಎದುರು ರೈತರು ಧರಣಿ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.