ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಬಾಕಿ ಇರುವ ತುಟ್ಟಿಭತ್ಯೆ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಒತ್ತಾಯಿಸಿದ್ದಾರೆ.
ಮಂಗಳವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಅವರು, ರಾಜ್ಯ ಸರ್ಕಾರ ನೌಕರರಿಗೆ ಬಾಕಿ ಇರುವ ತುಟ್ಟಿಭತ್ಯೆ ಬಿಡುಗಡೆಗೆ ಮನವಿ ಸಲ್ಲಿಸಿದ್ದಾರೆ. ಕೇಂದ್ರ ಸರ್ಕಾರ ಈಗಾಗಲೇ ನೌಕರರಿಗೆ ಶೇಕಡ 3ರಷ್ಟು ತುಟ್ಟಿಭತ್ಯೆ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ಬಾಕಿ ಇರುವ ಶೇಕಡ 3ರಷ್ಟು ತುಟ್ಟಿಭತ್ಯೆ ಬಿಡುಗಡೆ ಮಾಡುವಂತೆ ಷಡಾಕ್ಷರಿ ಸಿಎಂಗೆ ಮನವಿ ಮಾಡಿದ್ದಾರೆ.