ಬೆಂಗಳೂರು: ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಹೋರಾಟ ಕೈಗೊಂಡ ನಂತರ ಗೌರವಧನ ಹೆಚ್ಚಳ ಮಾಡಲಾಗಿದೆ. ಆದರೆ, 15 ಗಂಟೆಗಳ ಕಾರ್ಯಭಾರದಿಂದಾಗಿ ಅರ್ಧದಷ್ಟು ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳಲಿದ್ದಾರೆ ಎನ್ನಲಾಗಿದೆ.
ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಗೌರವಧನ ಹೆಚ್ಚಳ ಮಾಡಲಾಗಿದ್ದು, ಈಗ ಕೆಲವು ಸಂಘಟನೆಗಳು ಅನಗತ್ಯ ರಾಜಕೀಯ ಬಣ್ಣ ಬಳಿಯುತ್ತಿರುವ ಸರಿಯಲ್ಲವೆಂದು ಹೇಳಿದ್ದಾರೆ.
ಗೌರವಧನ ಎಚ್ಚರದ ಬಳಿಕ ಉಪನ್ಯಾಸಕರು ಮುಷ್ಕರ ಹಿಂಪಡೆಯುವುದಿಲ್ಲ ಎಂದು ಹೇಳಿರುವ ಕುರಿತಾಗಿ ಮಾತನಾಡಿದ ಸಚಿವರು, ರಾಜ್ಯದಲ್ಲಿ 14 ಸಾವಿರಕ್ಕೂ ಅಧಿಕ ಉಪನ್ಯಾಸಕರಿದ್ದಾರೆ. ಇವರಲ್ಲಿ 4500 ಮಂದಿ ಮಾತ್ರ ಯುಜಿಸಿ ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆ ಹೊಂದಿದ್ದು, ಅವರು ಸೇರಿ ಅತಿಥಿ ಉಪನ್ಯಾಸಕರೆಲ್ಲರ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ. ಸೇವಾ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.