alex Certify ಬಸವಣ್ಣರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸುವಂತೆ ಒತ್ತಾಯ : CM ಸಿದ್ದರಾಮಯ್ಯ ಹೇಳಿದ್ದಿಷ್ಟು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸವಣ್ಣರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸುವಂತೆ ಒತ್ತಾಯ : CM ಸಿದ್ದರಾಮಯ್ಯ ಹೇಳಿದ್ದಿಷ್ಟು..!

ಬೆಂಗಳೂರು : ವಚನ ಚಳವಳಿಯ ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ಒತ್ತಾಯಿಸಿ ತರಳಬಾಳು ಜಗದ್ಗುರುಗಳು ಮತ್ತು ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ನೇತೃತ್ವದ ಲಿಂಗಾಯತ ಸ್ವಾಮೀಜಿಗಳು, ಪ್ರಗತಿಪರ ಸ್ವಾಮೀಜಿಗಳು, ಪ್ರಗತಿಪರ ಚಿಂತಕರು ಮತ್ತು ದಲಿತ, ರೈತ, ಕಾರ್ಮಿಕ, ಮಹಿಳಾ ಚಳವಳಿಗಳ ಮುಖಂಡರುಗಳ ನಿಯೋಗದ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ, ಮಾತನಾಡಿದರು.

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿಯನ್ನಾಗಿಸಬೇಕು ಎನ್ನುವ ಒಕ್ಕೊರಲ ಒತ್ತಾಯವನ್ನು ಗೌರವಿಸುತ್ತೇನೆ. ವೈಯುಕ್ತಿಕವಾಗಿ ನನಗೆ ಈ ಘೋಷಣೆ ಬಗ್ಗೆ ತಕರಾರಿಲ್ಲ. ಈ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆಗಿಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು  ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಸವಾದಿ ಶರಣರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿವೆ. ವಚನ ಮತ್ತು ಸಂವಿಧಾನದ ಧ್ಯೇಯೋದ್ದೇಶಗಳು ಒಂದೇ ಆಗಿವೆ. ಆದ್ದರಿಂದ ಈ ಮಹತ್ವದ ಸಂಗತಿಯನ್ನು ಕ್ಯಾಬಿನೆಟ್ ಮುಂದೆ ಇಟ್ಟು ತೀರ್ಮಾನಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಚನ ಚಳವಳಿಯ ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ಒತ್ತಾಯಿಸಿ ತರಳಬಾಳು ಜಗದ್ಗುರುಗಳು ಮತ್ತು ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ನೇತೃತ್ವದ ಲಿಂಗಾಯತ ಸ್ವಾಮೀಜಿಗಳು, ಪ್ರಗತಿಪರ ಸ್ವಾಮೀಜಿಗಳು, ಪ್ರಗತಿಪರ ಚಿಂತಕರು ಮತ್ತು ದಲಿತ, ರೈತ, ಕಾರ್ಮಿಕ ಮುಖಂಡರುಗಳ ನಿಯೋಗ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿ ಮನವಿ ಸಲ್ಲಿಸಿದರು.

ನಿಯೋಗದಲ್ಲಿ ಶ್ರೀಶೈಲ ಜಗದ್ಗುರುಗಳು, ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಡಾ.ರಾಜಶೇಖರ ಶಿವಾಚಾರ್ಯರು, ಡಾ.ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ, ಶ್ರೀ ವೀರಭದ್ರ ಶಿವಾ ಕಡಕಂಚಿ, ಅಕ್ಕ ಅನ್ನಪೂರ್ಣತಾಯಿ, ಜ್ಞಾನ ಪ್ರಕಾಶ ಸ್ವಾಮೀಜಿ, ಡಾ.ಗಂಗಾಬಿಕೆ ಅಕ್ಕ, ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿ 48 ಮಂದಿ ಸ್ವಾಮೀಜಿಗಳು, ಶರಣರು ನಿಯೋಗದಲ್ಲಿದ್ದರು.

ಸಚಿವರಾದ ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಹಾಗೂ ಕ್ರೈಸ್ತ ಧರ್ಮ ಗುರುಗಳು, ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ವಲಯದಿಂದ ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಎಚ್.ಎಲ್.ಪುಷ್ಪ, ಮಾವಳ್ಳಿ ಶಂಕರ್, ವಸುಂಧರ ಭೂಪತಿ, ಕೆ.ಷರೀಫಾ, ಎಲ್.ಮುಕುಂದರಾಜು, ಜಾಗೃತ ಕರ್ನಾಟಕದ ಬಿ.ಸಿ.ಬಸವರಾಜು, ದೊಡ್ಡಿಪಾಳ್ಯ ನರಸಿಂಹಮೂರ್ತಿ ಸೇರಿ ಹಲವು ಪ್ರಮುಖರು ನಿಯೋಗದ ಜೊತೆಗಿದ್ದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...