ದೇಶದ 9 ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವಂತೆ ಕೋರಿ ಬಾಕಿ ಇರುವ ಅರ್ಜಿಯನ್ನ ಹೈಕೋರ್ಟ್ನಿಂದ ಸುಪ್ರೀಂಕೋರ್ಟ್ಗೆ ವರ್ಗಾಯಿಸಲು ಸಲ್ಲಿಸಿರುವ ಮನವಿಗೆ ಉತ್ತರ ನೀಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ನೋಟಿಸ್ನಲ್ಲಿ ಈ ಮನವಿಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.
ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗದ ಕಾಯ್ದೆಯ ನಿಬಂಧನೆಗಳನ್ನ ಬದಲಾವಣೆ ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಈ ಕಾನೂನುಗಳನ್ನ ಸುಪ್ರೀಂ ಕೋರ್ಟ್ ಎತ್ತಿ ಹಿಡಿದರೆ 9 ರಾಜ್ಯಗಳಲ್ಲಿ ಹಿಂದೂಗಳಿಗೆ ರಾಜ್ಯವಾರು ಅಲ್ಪಸಂಖ್ಯಾತ ಸ್ಥಾನಮಾನ ಸಿಗಲಿದೆ. ಅದರಿಂದ ಅವರಿಗೆ ಅಲ್ಪಸಂಖ್ಯಾತ ಕಾಯ್ದೆಯ ಲಾಭ ಹೆಚ್ಚುವರಿಯಾಗಿ ಸಿಗಲಿದೆ. ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡುವ ಮೂಲಕ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗದ ಕಾಯ್ದೆ 1992ಯನ್ನು ವಿರೋಧಿಸಿ ರಾಜ್ಯದ ವಿವಿಧ ಹೈಕೋರ್ಟ್ಗಳಲ್ಲಿ ಸಲ್ಲಿಸಲಾಗಿರುವ ಅರ್ಜಿಗಳನ್ನ ಸುಪ್ರೀಂಕೋರ್ಟ್ಗೆ ವರ್ಗಾಯಿಸುವಂತೆ ಸೂಚನೆ ನೀಡಲಾಗಿದೆ.
ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ದಾಖಲು ಮಾಡಿರುವ ಅರ್ಜಿಯಲ್ಲಿ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗ ಕಾಯ್ದೆಯಡಿಯಲ್ಲಿ ಮುಸ್ಲಿಂ, ಕ್ರಿಶ್ಚಿಯನ್, ಸಿಖ್ , ಬೌದ್ಧ ಹಾಗೂ ಜೈನ ಧರ್ಮವನ್ನ ಅಲ್ಪಸಂಖ್ಯಾತ ಎಂದು ಘೋಷಣೆ ಮಾಡಲಾಗಿದೆ. ಆದರೆ ಯಹೂದಿಗಳನ್ನ ಅಲ್ಪಸಂಖ್ಯಾತ ಎಂದು ಘೋಷಣೆ ಮಾಡಲಾಗಿಲ್ಲ. ಇದು ಮಾತ್ರವಲ್ಲದೇ ದೇಶದ 9 ರಾಜ್ಯಗಳಲ್ಲಿ ಹಿಂದೂ ಅಲ್ಪಸಂಖ್ಯಾತರಿದ್ದಾರೆ. ಆದರೆ ಅವರಿಗೆ ಅಲ್ಪಸಂಖ್ಯಾತರ ಸೌಲಭ್ಯ ಸಿಗುತ್ತಿಲ್ಲ. ಲಡಾಖ್, ಮಿಝೋರಾಂ, ಲಕ್ಷದ್ವೀಪ, ಕಾಶ್ಮೀರ, ನಾಗಾಲ್ಯಾಂಡ್, ಮೇಘಾಲಯ, ಅರುಣಾಚಲ ಪ್ರದೇಶ, ಪಂಜಾಬ್ ಹಾಗೂ ಮಣಿಪುರದಲ್ಲಿ ಹಿಂದೂ ಅಲ್ಪಸಂಖ್ಯಾತರಿದ್ದಾರೆ. ಆದರೆ ಹಿಂದೂಗಳಿಗೆ ಅಲ್ಪಸಂಖ್ಯಾತ ಕಾಯ್ದೆಯಡಿ ಸ್ಥಾನವಿಲ್ಲದ ಕಾರಣ ಸೌಲಭ್ಯವಂಚಿತರಾಗಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.
ಹೀಗಾಗಿ ಈ ವಿಚಾರವಾಗಿ ಸುಪ್ರೀಂ ಕೇಂದ್ರ ಸರ್ಕಾರದ ಬಳಿ ಉತ್ತರ ನೀಡುವಂತೆ ಸೂಚನೆಯನ್ನ ನೀಡಿ ನೋಟಿಸ್ ಹೊರಡಿಸಿದೆ. ಈಗಾಗಲೇ ದೇಶದ ಐದು ಹೈಕೋರ್ಟ್ಗಳಲ್ಲಿ ಈ ವಿಚಾರವಾಗಿ ವಿಚಾರಣೆ ನಡೆಯುತ್ತಿದೆ. ಈ ಪ್ರಕರಣಗಳನ್ನ ವರ್ಗಾವಣೆ ಮಾಡುವಂತೆ ಸೂಚನೆ ನೀಡಿರುವ ಸರ್ವೋಚ್ಛ ನ್ಯಾಯಾಲಯ ಕೇಂದ್ರ ಗೃಹ, ಕಾನೂನು ಹಾಗೂ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯಕ್ಕೆ ನೋಟಿಸ್ ಹೊರಡಿಸಿದೆ. ಹಾಗೂ ನೋಟಿಸ್ಗೆ ಉತ್ತರಿಸಲು ಕೇಂದ್ರ ಸರ್ಕಾರಕ್ಕೆ 4 ವಾರಗಳ ಕಾಲ ಅವಕಾಶವನ್ನ ನೀಡಲಾಗಿದೆ.