alex Certify BIG NEWS: 9 ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಕುರಿತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 9 ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಕುರಿತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟೀಸ್

ದೇಶದ 9 ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವಂತೆ ಕೋರಿ ಬಾಕಿ ಇರುವ ಅರ್ಜಿಯನ್ನ ಹೈಕೋರ್ಟ್​ನಿಂದ ಸುಪ್ರೀಂಕೋರ್ಟ್​ಗೆ ವರ್ಗಾಯಿಸಲು ಸಲ್ಲಿಸಿರುವ ಮನವಿಗೆ ಉತ್ತರ ನೀಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ನೋಟಿಸ್​ನಲ್ಲಿ ಈ ಮನವಿಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗದ ಕಾಯ್ದೆಯ ನಿಬಂಧನೆಗಳನ್ನ ಬದಲಾವಣೆ ಮಾಡುವಂತೆ  ಕೋರಿ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಈ ಕಾನೂನುಗಳನ್ನ ಸುಪ್ರೀಂ ಕೋರ್ಟ್ ಎತ್ತಿ ಹಿಡಿದರೆ 9 ರಾಜ್ಯಗಳಲ್ಲಿ ಹಿಂದೂಗಳಿಗೆ ರಾಜ್ಯವಾರು ಅಲ್ಪಸಂಖ್ಯಾತ ಸ್ಥಾನಮಾನ ಸಿಗಲಿದೆ. ಅದರಿಂದ ಅವರಿಗೆ ಅಲ್ಪಸಂಖ್ಯಾತ ಕಾಯ್ದೆಯ ಲಾಭ ಹೆಚ್ಚುವರಿಯಾಗಿ ಸಿಗಲಿದೆ. ಕೇಂದ್ರ ಸರ್ಕಾರಕ್ಕೆ ನೋಟಿಸ್​ ನೀಡುವ  ಮೂಲಕ  ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗದ ಕಾಯ್ದೆ 1992ಯನ್ನು ವಿರೋಧಿಸಿ ರಾಜ್ಯದ ವಿವಿಧ ಹೈಕೋರ್ಟ್​ಗಳಲ್ಲಿ ಸಲ್ಲಿಸಲಾಗಿರುವ ಅರ್ಜಿಗಳನ್ನ ಸುಪ್ರೀಂಕೋರ್ಟ್​ಗೆ ವರ್ಗಾಯಿಸುವಂತೆ ಸೂಚನೆ ನೀಡಲಾಗಿದೆ.

ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ದಾಖಲು ಮಾಡಿರುವ ಅರ್ಜಿಯಲ್ಲಿ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗ ಕಾಯ್ದೆಯಡಿಯಲ್ಲಿ ಮುಸ್ಲಿಂ, ಕ್ರಿಶ್ಚಿಯನ್​, ಸಿಖ್​ , ಬೌದ್ಧ ಹಾಗೂ ಜೈನ ಧರ್ಮವನ್ನ ಅಲ್ಪಸಂಖ್ಯಾತ ಎಂದು ಘೋಷಣೆ ಮಾಡಲಾಗಿದೆ. ಆದರೆ ಯಹೂದಿಗಳನ್ನ ಅಲ್ಪಸಂಖ್ಯಾತ ಎಂದು ಘೋಷಣೆ ಮಾಡಲಾಗಿಲ್ಲ. ಇದು ಮಾತ್ರವಲ್ಲದೇ ದೇಶದ 9 ರಾಜ್ಯಗಳಲ್ಲಿ ಹಿಂದೂ ಅಲ್ಪಸಂಖ್ಯಾತರಿದ್ದಾರೆ. ಆದರೆ ಅವರಿಗೆ ಅಲ್ಪಸಂಖ್ಯಾತರ ಸೌಲಭ್ಯ ಸಿಗುತ್ತಿಲ್ಲ. ಲಡಾಖ್​, ಮಿಝೋರಾಂ, ಲಕ್ಷದ್ವೀಪ, ಕಾಶ್ಮೀರ, ನಾಗಾಲ್ಯಾಂಡ್​, ಮೇಘಾಲಯ, ಅರುಣಾಚಲ ಪ್ರದೇಶ, ಪಂಜಾಬ್​ ಹಾಗೂ ಮಣಿಪುರದಲ್ಲಿ ಹಿಂದೂ ಅಲ್ಪಸಂಖ್ಯಾತರಿದ್ದಾರೆ. ಆದರೆ ಹಿಂದೂಗಳಿಗೆ ಅಲ್ಪಸಂಖ್ಯಾತ ಕಾಯ್ದೆಯಡಿ ಸ್ಥಾನವಿಲ್ಲದ ಕಾರಣ ಸೌಲಭ್ಯವಂಚಿತರಾಗಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ಹೀಗಾಗಿ ಈ ವಿಚಾರವಾಗಿ ಸುಪ್ರೀಂ ಕೇಂದ್ರ ಸರ್ಕಾರದ ಬಳಿ ಉತ್ತರ ನೀಡುವಂತೆ ಸೂಚನೆಯನ್ನ ನೀಡಿ ನೋಟಿಸ್​ ಹೊರಡಿಸಿದೆ. ಈಗಾಗಲೇ ದೇಶದ ಐದು ಹೈಕೋರ್ಟ್​ಗಳಲ್ಲಿ ಈ ವಿಚಾರವಾಗಿ ವಿಚಾರಣೆ ನಡೆಯುತ್ತಿದೆ. ಈ ಪ್ರಕರಣಗಳನ್ನ ವರ್ಗಾವಣೆ ಮಾಡುವಂತೆ ಸೂಚನೆ ನೀಡಿರುವ ಸರ್ವೋಚ್ಛ ನ್ಯಾಯಾಲಯ ಕೇಂದ್ರ ಗೃಹ, ಕಾನೂನು ಹಾಗೂ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯಕ್ಕೆ ನೋಟಿಸ್​ ಹೊರಡಿಸಿದೆ. ಹಾಗೂ ನೋಟಿಸ್​ಗೆ ಉತ್ತರಿಸಲು ಕೇಂದ್ರ ಸರ್ಕಾರಕ್ಕೆ 4 ವಾರಗಳ ಕಾಲ ಅವಕಾಶವನ್ನ ನೀಡಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...