alex Certify ʻಸಂವಿಧಾನ ಇಲ್ಲದ ಪ್ರಜಾಪ್ರಭುತ್ವ, ಆತ್ಮ ಇಲ್ಲದ ಜೀವʼ : ನಾಡಿನ ಜನತೆಗೆ ʻಗಣರಾಜ್ಯೋತ್ಸವʼದ ಶುಭ ಕೋರಿದ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʻಸಂವಿಧಾನ ಇಲ್ಲದ ಪ್ರಜಾಪ್ರಭುತ್ವ, ಆತ್ಮ ಇಲ್ಲದ ಜೀವʼ : ನಾಡಿನ ಜನತೆಗೆ ʻಗಣರಾಜ್ಯೋತ್ಸವʼದ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗಣರಾಜ್ಯೋತ್ಸವದ ಅಂಗವಾಗಿ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ಮಹಾತ್ಮಾ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಗೌರವ ನಮನ ಸಲ್ಲಿಸಿದರು.

ಭಾರತವು ತನ್ನನ್ನು ತಾನು ಆಳಿಕೊಳ್ಳಲು ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು 2024ರ ಜನವರಿ 26ಕ್ಕೆ 75 ವರ್ಷಗಳು ತುಂಬುತ್ತಿದೆ. ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿಪಡಿಸಿ, ಎಲ್ಲರ ನಡುವೆ ಭ್ರಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಮೂಲ ಆಶಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಶ್ವಕ್ಕೆ ಮಾದರಿ ಸ್ವರೂಪದ ಇಂತಹದ್ದೊಂದು ಸಂವಿಧಾನವನ್ನು ನಮಗೆ ನೀಡಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಈ ಸಂದರ್ಭದಲ್ಲಿ ನೆನಪುಮಾಡಿಕೊಂಡು ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ. ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು ಎಂದು ತಿಳಿಸಿದ್ದಾರೆ.

ಸಂವಿಧಾನ ಎನ್ನುವುದು ಪ್ರಜಾಪ್ರಭುತ್ವದ ಆತ್ಮ. ಸಂವಿಧಾನ ಇಲ್ಲದ ಪ್ರಜಾಪ್ರಭುತ್ವ, ಆತ್ಮ ಇಲ್ಲದ ಜೀವ.  ಸಂವಿಧಾನವನ್ನು ನಾವು ರಕ್ಷಿಸಿದರೆ ಸಂವಿಧಾನವು ನಮ್ಮನ್ನು ರಕ್ಷಿಸುತ್ತದೆ ಎಂಬ ತತ್ವವನ್ನು ಮರೆಯದಿರೋಣ. ಈ ಮೂಲಕ ಭಾರತದ ಗಣರಾಜ್ಯದ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿಸೋಣ ಎಂದು ಹೇಳಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...