ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರದ ನಡುವೆ ಮಹಾಮಾರಿ ಡೆಂಗ್ಯೂ ಪ್ರಕರಣದ ಆರ್ಭಟವೂ ಹೆಚ್ಚುತ್ತಿದೆ. ಒಂದೇ ದಿನದಲ್ಲಿ 175 ಜನರಲ್ಲಿ ಡೆಂಗ್ಯೂ ಸೋಂಕು ಪತ್ತೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ವ್ಯಾಪಕವಾಗಿ ಹರಡುತ್ತಿದ್ದು, ಒಂದೇ ದಿನದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 115 ಜನರಲ್ಲಿ ಡೆಂಗ್ಯೂ ದೃಢಪಟ್ಟಿದೆ. ಈಗಾಗಲೇ ಸೋಂಕಿತ 352 ಜನರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 127 ಸೋಂಕಿತರು ಬಿಬಿಎಂಪಿ ವ್ಯಾಪ್ತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ ಈವರೆಗೆ 7000 ಜನರು ಡೆಂಗ್ಯೂ ಸೋಂಕಿನಿಂದ ಬಳಲುತ್ತಿದ್ದಾರೆ. ಶನಿವಾರ ಒಂದೇ ದಿನದಲ್ಲಿ 175 ಜನರಲ್ಲಿ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.